ಮೂಡಲಗಿ -ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ 2023-24 ನೆಯ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ ವಿವಿಧ ವೇದಿಕೆ ಕಾರ್ಯ ಚಟುವಟಿಕೆಗಳು ಶ್ರೀ ರಾಮಲಿಂಗಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸರ್ವಾಂಗೀಣ ಪ್ರಗತಿ ಸಾಧಿಸಬೇಕು ಎಂದು ಬೆಳಗಾವಿಯ ರಾಣಿ ಚೆನ್ನಮ್ಮ ಮೌಲ್ಯಮಾಪನ ಕುಲಸಚಿವರಾದ ಪ್ರೊ.ರವೀಂದ್ರನಾಥ ಕದಮ ಹೇಳಿದರು.
ಸಾಧನೆಗೆ ಯಾವುದೇ ಮಿತಿಯಿಲ್ಲ,ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕ,ಕ್ರೀಡೆ,ಸಾಂಸ್ಕೃತಿಕ ಹಾಗೂ ಎನ್ ಎಸ್ ಎಸ್ ವಿಭಾಗಗಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದರು.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಸರಿಯಾದ ಸಂದರ್ಭದಲ್ಲಿ ಪರೀಕ್ಷೆ ,ಪಲಿತಾಂಶ ನೀಡಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕೆಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಮಾತನಾಡಿದರು.
ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಪ್ರಾಸ್ತಾವಿಕ ಕಾಲೇಜಿನ ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ಹೇಳಿದರು.
ವೀಣಾ ಕಂಕಣವಾಡಿ ಪ್ರಾರ್ಥಿಸಿದರು, ಪ್ರೊ.ಡಿ.ಎಸ್.ಹುಗ್ಗಿ ಸ್ವಾಗತಿಸಿದರು,ಡಾ. ಕೆ.ಎಸ್.ಪರವ್ವಗೋಳ ನಿರೂಪಿಸಿದರು, ಪ್ರೊ.ಎ.ಎಸ್.ಮೀಸಿ ನಾಯಿಕ ವಂದಿಸಿದರು.
ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು