ಸರ್ಕಾರಿ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಆದೇಶ

Must Read

ಬೆಂಗಳೂರು – ಕರ್ನಾಟಕ ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಆದೇಶ ಹೊರಡಿಸಿದ್ದಾರೆ.

ದಿ. ೨೦ ರಂದು ಸುತ್ತೋಲೆಯೊಂದನ್ನು ಹೊರಡಿಸಿರುವ ಅವರು, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ೨೦೨೨ ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ ೨೦೨೪ ಜಾರಿಗೆ ಬಂದಿದೆ.

ಆದುದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ ಎಲ್ಲಾ ಆಯುಕ್ತಾಲಯ, ನಿರ್ದೇಶನಾಲಯ, ನಿಗಮ ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಪ್ರದರ್ಶಿಸಲು ಸೂಚಿಸಿದೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕನ್ನಡ ಭಾಷೆಯ ಫಲಕದಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಮೇಲ್ಭಾಗದಲ್ಲಿ ಇರುವಂತೆ ಹಾಗೂ ಶೇ. ೪೦ ಆಂಗ್ಲ ಭಾಷೆಯಲ್ಲಿ ಇರುವಂತೆ ನಾಮಫಲಕ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group