spot_img
spot_img

ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ

Must Read

- Advertisement -

ಬೆಳಗಾವಿ:-ತಾಲೂಕಿನ ಹಿಂಡಲಗಾ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಸನ್ 2023-2024ನೆಯ ಸಾಲಿನ ಪ್ರತಿಭಾ ಕಾರಂಜಿಯು ಇತ್ತೀಚೆಗೆ ಅದ್ದೂರಿಯಾಗಿ ವಿಜಯನಗರದ ಸರಕಾರಿ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಜರುಗಿತು

ಹಿಂಡಲಗಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಪರಶುರಾಮ ಹಿತ್ತಲಮನಿ ಯವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿದರು

ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶ್ರೀಮತಿ ಚೇತನಾ ಸುರೇಶ ಅಗಸಗೇಕರ ರವರು ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು, ಸಿ ಆರ್ ಪಿ  ಸತೀಶ ಪಾಟೀಲ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಭಾ ಕಾರಂಜಿ ಕಾರ್ಯಕ್ರಮದ ರೂಪು ರೇಷೆ ವಿವರಿಸಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕಲೆಯ ಅನಾವರಣಕ್ಕೆ ಈ ವೇದಿಕೆಯನ್ನು ಬಳಸಿಕೊಳ್ಳಬೇಕೆಂದರು

- Advertisement -

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಶಂಕರ ದೇಸಾಯಿ, ಡಿ ಬಿ ಪಾಟೀಲ, ರಾಹುಲ ಉಸಲಕರ,ಮಾಸ್ತ ಮರಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯ ಹಿರಿಯ ಮುಖ್ಯೋಪಾದ್ಯಾಯರಾದ ಬಸವರಾಜ ಫಕೀರಪ್ಪ ಸುಣಗಾರ, ಹಿರಿಯ ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಆರ್ ವಿ ಭಟ್,ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ಅರ್ಚನಾ ಪಾಟೀಲ, ಶ್ರೀಮತಿ ಲಕ್ಷ್ಮೀ ಗಾಡಿವಡ್ಡರ ರವರು ಸೇರಿದಂತೆ ಹಲವು ಗಣ್ಯರು ಉದ್ಘಾಟನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,

ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, ಹೆಸರೇ ಸೂಚಿಸುವಂತೆ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಲ್ಲಿಯ ಪ್ರತಿಭೆಯನ್ನು ಕಾರಂಜಿ ರೂಪದಲ್ಲಿ ಹೊರಹೊಮ್ಮಿಸುತ್ತದೆ, ವಿದ್ಯಾರ್ಥಿಗಳಲ್ಲಿಯ ಕಲೆಯನ್ನು ಸಮುದಾಯಕ್ಕೆ ಅನಾವರಣ ಮಾಡುವಲ್ಲಿ ಸೂಕ್ತವೇದಿಕೆ ಯಾಗಿದೆ, ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಸಹಾಯಕವಾಗಿದೆ, ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಬದುಕಿನಲ್ಲಿ ಯಶಸ್ಸು ಪಡೆಯಲು ಮಾರ್ಗದರ್ಶನ ಮಾಡಿದರು

ಕಾರ್ಯಕ್ರಮ ದಲ್ಲಿ ಹಿಂಡಲಗಾ ಕೇಂದ್ರ ಶಾಲಾವ್ಯಾಪ್ತಿಯ, ಮುಖ್ಯಶಿಕ್ಷಕರು,ಶಿಕ್ಷಕ ಶಿಕ್ಷಕಿಯರು, ನಿರ್ಣಾಯಕರು, ಗ್ರಾಮಸ್ಥರು, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶಾಲೆಗಳವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು,

- Advertisement -

ಪ್ರಾರಂಭದಲ್ಲಿ ವಿಜಯನಗರ ಕನ್ನಡ ಹಾಗೂ ಮರಾಠಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಕನ್ನಡ ಶಾಲೆಯ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಸರಳಾ ಕಡೇಮನಿ ಸರ್ವರನ್ನು ಸ್ವಾಗತಿಸಿದರು, ಕಾರ್ಯಕ್ರಮದ ಕುರಿತು ಮರಾಠಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ನಯನಾ ಡಿ ಕೀರ್ತನೆ ಮಾತನಾಡಿದರು,

ಶಿಕ್ಷಕಿ ಶ್ರೀಮತಿ ಶಾಂತಾ ಅಡಿವೆಪ್ಪ ಸಿದ್ದಣ್ಣವರ ವಂದಿಸಿದರು, ಮರಾಠಿ ಶಾಲೆಯ ಕನ್ನಡ ಶಿಕ್ಷಕರಾದ ರುದ್ರಯ್ಯ ಈರಯ್ಯ ಮೇಟ್ಯಾಲಮಠರವರು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ವಹಣೆ ಮಾಡಿ ಕಾರ್ಯಕ್ರಮಕ್ಕೆ ಸಹಾಯ ಸಹಕಾರ ನೀಡಿದವರನ್ನು ಅಭಿನಂದಿಸಿದರು

ಕಾರ್ಯಕ್ರಮದಲ್ಲಿ ಹಲವು ದಾನಿಗಳು ದೇಣಿಗೆಯ ರೂಪದಲ್ಲಿ ವಸ್ತು ನೀಡಿ ಯಶಸ್ಸಿಗೆ ಸಹಕರಿಸಿದರು, ಎರಡು ಶಾಲೆಯ ಶಿಕ್ಷಕ-ಶಿಕ್ಷಕರು ಶ್ರಮಿಸಿದರು

- Advertisement -
- Advertisement -

Latest News

ಮನೋಜ್ಞ ಅನುಭೂತಿಯ ವಿಶ್ವ ಧ್ಯಾನದ ದಿನಾಚರಣೆ 

      ಮೈಸೂರಿನ ಮಾನಸಗಂಗೋತ್ರಿಯು ಇಂದು ಮನಸ್ಸನ್ನು ಮುದಗೊಳಿಸುವ ಅಪರೂಪದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯು 21 ಡಿಸೆಂಬರ್ ವಿಶ್ವ ಧ್ಯಾನದ ದಿನವನ್ನಾಗಿ ಆಚರಿಸಲು...
- Advertisement -

More Articles Like This

- Advertisement -
close
error: Content is protected !!
Join WhatsApp Group