ಅಂತಾರಾಷ್ಟ್ರೀಯ ದಾಸ ಸಾಹಿತ್ಯ ಸಮಾವೇಶದ ಕರಪತ್ರ ಉದ್ಘಾಟನೆ 

Must Read
     ಉಡುಪಿಯ ಪರ್ಯಾಯ ಪುತ್ತಿಗೆ ಮಠ, ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಮತ್ತು ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗದ ಸಂಯುಕ್ತ ಆಶ್ರಯದಲ್ಲಿ ಅಪರೋಕ್ಷ ಜ್ಞಾನಿಗಳಾದ ಶ್ರೀ ವಿಜಯದಾಸರ ಆರಾಧನಾ ಅಂಗವಾಗಿ ಉಡುಪಿಯ ಕೃಷ್ಣನ ಸನ್ನಿಧಿಯಲ್ಲಿ ನವೆಂಬರ್ 9-11 ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಕರಪತ್ರವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಮತ್ತು ಕಿರಿಯ ಶ್ರೀಗಳು ಶ್ರೀ ಸುಶೀoದ್ರ ತೀರ್ಥರು ಲೋಕಾರ್ಪಣೆಗೊಳಿಸಿ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು.
     ಶ್ರೀಮಠದ ಪ್ರಸನ್ನಾಚಾರ್ಯ, ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ. ಗೋಪಾಲಚಾರ್ಯ, ಶ್ರೀನಿವಾಸ ಉತ್ಸವ ಬಳಗದ ಟಿ. ವಾದಿರಾಜ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಡಾ. ಗುರುರಾಜ ಪೋಶೆಟ್ಟಿ ಹಳ್ಳಿ ಉಪಸ್ಥಿತರಿದ್ದರು.
ದೇಶ – ವಿದೇಶಗಳಿಂದ ದಾಸಸಾಹಿತ್ಯ ಅಭಿಮಾನಿಗಳು ಆಗಮಿಸಿ ವಿಜಯದಾಸರು ವರ್ಣಿಸಿದ ಉಡುಪಿ -ಕೃಷ್ಣನ ಬಗ್ಗೆ ವಿದ್ವತ್ಪೂರ್ಣ  ಪ್ರಬಂಧ ಮಂಡಿಸಲು ಅವಕಾಶವಿದೆ, ಇದೇ ಸಂದರ್ಭದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣ ವನ್ನು ಹಮ್ಮಿಕೊಳ್ಳಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group