ಸಾಲಧ ಭಾದೆಗೆ ಸಿಲುಕಿ ಬ್ರಿಮ್ಸ್ ಡಾಕ್ಟರ್ ಆತ್ಮಹತ್ಯೆ

Must Read

ಬೀದರ – ಬೀದರ ಜಿಲ್ಲಾಸ್ಪತ್ರೆ ಬ್ರಿಮ್ಸ್ ನಲ್ಲಿ ಪೋಸ್ಟ್ ಮಾರ್ಟಂ ಮಾಡುವ ವೈದ್ಯರೆಂದೇ ಖ್ಯಾತಿಯಾಗಿದ್ದ ಡಾ.ಮಹ್ಮದ್ ಸೊಹೇಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀದರ್ ಹೊರವಲಯದ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಡಾಕ್ಟರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಪಿಜಿ ವಿದ್ಯಾರ್ಥಿ ಯಾಗಿದ್ದರು.
ಸೊಹೇಲ್ ಅವರು ಬಜಾಜ್ ಫೈನಾನ್ಸ್ ಹಾಗೂ ಇನ್ನಿತರ ಖಾಸಗಿ ಆನ್ ಲೈನ್ ಸಂಸ್ಥೆಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಕಳೆದ ಸಪ್ಟೆಂಬರ್4 ರಂದು ಮನೆಯಿಂದ ಬೈಕ್ ಮೇಲೆ ಹೊರ ಹೋಗಿದ್ದ ಡಾ.ಮಹ್ಮದ್ ಸೊಹೆಲ್ ಅವರ ಶವ ಸಪ್ಟೆಂಬರ್10 ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group