ಶಿವಾಪೂರ(ಹ) ಪ್ರೌಢ ಶಾಲೆಯ ಬಾಲಕಿಯರ ಖೋ ಖೋ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Must Read

ಶಿವಾಪೂರ(ಹ): ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಖೋ ಖೋ ತಂಡ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,

ಬಾಲಕರ ವಿಭಾಗದಲ್ಲಿ ಕೌಜಲಗಿ ಶಾಲೆಯ ವಿದ್ಯಾರ್ಥಿಗಳು ವಿಜೇತ ರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಮೂಡಲಗಿಯ ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ನ್ಯಾಯವಾದಿ ಎಲ್ ವಾಯ ಅಡಿಹುಡಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಟೋಟಗಳಲ್ಲಿ ಪಾಲ್ಗೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕೇಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ್ ಮನ್ನಿಕೇರಿ,ಅತಿಥಿಗಳಾಗಿ ಜೆ ಜೆ ಆಸ್ಪತ್ರೆ ನಿರ್ದೇಶಕರಾದ ಎಸ್.ಎಸ್ ಪಾಟೀಲ,ಎಸ್ ಡಿ ಎಂ ಸಿ ಅಧ್ಯಕ್ಷ ಎಸ್ ಬಿ ರಡ್ಡೇರಟ್ಟಿ,ಮುಖ್ಯೋಪಾಧ್ಯಾಯ ಜೆ ಜೆ ಬಾಸ್ಮೇ ,ಎಸ್.ವಾಯ ಜುಂಜರವಾಡ,ಕೆ.ಬಿ ಮುಧೋಳ, ಕೆ. ಜಿ ಮುಧೋಳ, ಎಸ್.ಡಿ ಪಾಟೀಲ,ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಮನವ್ವ ಗಿಡ್ಡವ್ವಗೋಳ, ಹಾಗೂ ಎಲ್ಲ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು,ಕ್ರೀಡಾಭಿಮಾನಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು. ಸ್ವಾಗತ ಭಾಷಣವನ್ನು ಎಸ್ ಸಿ ಆರಗಿ,ವಂದನಾರ್ಪನೇ ಸಂತೋಷ ಪಾಟೀಲ,  ನಿರೂಪಣೆ ಎಚ್.ಬಿ ಸುಳ್ಳನವರ, ಪ್ರತಿಜ್ಞೆ ವಿಧಿಯನ್ನು ಕೆ ಎಚ್ ಪಾಟೀಲ ಮಾಡಿದರು.

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...

More Articles Like This

error: Content is protected !!
Join WhatsApp Group