ಗಣಿತ ಕಲಿಕಾ ಆಂದೋಲನ ಪರೀಕ್ಷೆ ಕಾರ್ಯಕ್ರಮ

Must Read

ಮೂಡಲಗಿ:-ತಾಲೂಕಿನ ಖಾನಟ್ಟಿ ಗ್ರಾಮದಲ್ಲಿ, ದಿನಾಂಕ 19 ರಂದು ಗ್ರಾಮ ಪಂಚಾಯತ ಮಟ್ಟದ ಗಣಿತ ಕಲಿಕಾ ಆಂದೋಲನ ಪರೀಕ್ಷೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಶ್ರೀಮತಿ ಅನುರಾಧ ಭಜಂತ್ರಿ ರವರ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಸ್ಥಾನದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಸದಸ್ಯರಾದ ಶ್ರೀಶೈಲ ತುಪ್ಪದ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಕಿಶೋರ ಗಣಾಚಾರಿ,ಬಸು ರೊಡ್ಡನ್ನವರ ಉಪಸ್ಥಿತರಿದ್ದರು.
ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರಥಮ ದ್ವಿತೀಯ ಹಾಗೂ ತೃತೀಯ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಗ್ರಾಮ ಪಂಚಾಯತ ಖಾನಟ್ಟಿ ವತಿಯಿಂದ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಗುರುಗಳಾದ ಚಂದ್ರಕಾಂತ ಕೊಡತೆ ಹಾಗೂ ಊರಿನ ಹಿರಿಯರಾದ ಶಿವನಪ್ಪ ಅಲ್ಲಪ್ಪ ತುಪ್ಪದ ಹಾಗೂ ಊರಿನ ಗಣ್ಯರು ಹಾಗೂ ಶಾಲೆಯ ಸಹ ಶಿಕ್ಷಕರು ಪಾಲ್ಗೊಂಡಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group