ಬಿಜೆಪಿ ಬಲವರ್ಧನೆಯಲ್ಲಿ ಪಂ. ದೀನ್ ದಯಾಳ್ ಉಪಾಧ್ಯಾಯ ಪಾತ್ರ ಅನನ್ಯ- ಸರ್ವೋತ್ತಮ ಜಾರಕಿಹೊಳಿ

Must Read

ಗೋಕಾಕ- ಬಿಜೆಪಿಯು ಇಷ್ಟು ದೊಡ್ಡ ಮಟ್ಟದಲ್ಲಿ ಬಲವರ್ಧನೆಯಾಗಲು ಪಂ. ದೀನ ದಯಾಳ್ ಉಪಾಧ್ಯಾಯ ಅವರ ಕೊಡುಗೆ ಅನನ್ಯ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಬುಧವಾರದಂದು ನಗರದ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಂಘದ ನಂತರ ಭಾರತೀಯ ಜನತಾ ಪಾರ್ಟಿಯಾಗಿ ಬಲಾಢ್ಯ ರಾಜಕೀಯ ಪಕ್ಷವಾಗಿ ಇಂದು ದೇಶದ ಪ್ರತಿ ಮೂಲೆ- ಮೂಲೆಗಳಲ್ಲಿಯೂ ಬೆಳೆದಿದೆ ಎಂದು ತಿಳಿಸಿದರು.

ಬಿಜೆಪಿ ಇಂದು ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ. ದೇಶದಲ್ಲಿಯೇ ಅತೀ ದೊಡ್ಡ ಪ್ರಮಾಣದಲ್ಲಿ ವ್ಯವಸ್ಥಿತವಾದ ಸಂಘಟನೆಯಿಂದ ಬೆಳೆದಿದೆ. ವಿಶ್ವ ಮಟ್ಟದಲ್ಲಿಯೂ ಬಿಜೆಪಿ ದೊಡ್ಡ ಪಕ್ಷವಾಗಿದೆ. ಇದಕ್ಕೆ ಶ್ಯಾಂ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಾಯ ಅವರು ಹಾಕಿಕೊಟ್ಟ ಮಾರ್ಗವೇ ಕಾರಣವೆಂದು ಹೇಳಬಹುದು. ಅವರ ತ್ಯಾಗ, ಪರಿಶ್ರಮದಿಂದಾಗಿ ಪಕ್ಷವು ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದು ತಿಳಿಸಿದರು.

ಪಂ. ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಸರ್ವೋತ್ತಮ ಜಾರಕಿಹೊಳಿ
ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ, ಸಿ.ಪಿ.ಯಕ್ಸಂಬಿ, ಅಬ್ದುಲ ಮಿರ್ಜಾನಾಯಿಕ, ಮುಖಂಡರಾದ ಅಶೋಕ ಖಂಡ್ರಟ್ಟಿ, ರಮೇಶ ಸಣ್ಣಕ್ಕಿ, ಪರಸಪ್ಪ ಉಪ್ಪಾರ, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಕವಿಗೋಷ್ಠಿಗೆ ಆಹ್ವಾನ

ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು,...

More Articles Like This

error: Content is protected !!
Join WhatsApp Group