ಬೈಲಹೊಂಗಲ: 2024-25 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ಬಾಲಕರ ಖೋಖೋ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ಇವರ ತರಬೇತಿ ಮತ್ತು ಮಾರ್ಗದರ್ಶನದಲ್ಲಿ ಮುತ್ತುರಾಜ ಜೋಗಿಗುಡ್ಡ (ನಾಯಕ), ಕಾರ್ತಿಕ ಈ. ಕುರಿ, ಬಸವರಾಜ ಗರಗದ, ಆದರ್ಶ ಸೂರ್ಯವಂಶಿ, ಕಲ್ಮೇಶ ಗುಡ್ಡದ, ಸುದರ್ಶನ ಸೊಗಲದ, ರುದ್ರಪ್ಪ ಕುರಿ, ಬಸವರಾಜ ಕಂಬಳಿ, ಶಶಿಕುಮಾರ ಸೊಗಲದ, ಈಶ್ವರ ಅಂಗಡಿ, ಮಲ್ಲಪ್ಪ ದಳವಾಯಿ, ಅಜಿತ ದೊಡ್ಡಮನಿ, ಕಾರ್ತಿಕ ಚಿ. ಕುರಿ ಉತ್ತಮ ಪ್ರದರ್ಶನ ತೋರಿ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜೆ.ಆರ್.ನರಿ, ಆರ್.ಸಿ.ಸೊರಟೂರ, ಎಚ್.ವಿ.ಪುರಾಣಿಕ, ಎಸ್.ವಿ.ಬಳಿಗಾರ, ಎಂ.ಎನ್.ಕಾಳಿ, ಕೆ.ಐ.ಯರಗಂಬಳಿಮಠ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.