ಕರ್ತವ್ಯದ ವೇಳೆ ಪೇದೆಗೆ ಹೃದಯಾಘಾತ, ಸಾವು

Must Read

ಬೀದರ – ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪೇದೆ.ರಾಯಚೂರು ಮೂಲದ ಚಂದ್ರಶೇಖರ್ (28) ಅವರಿಗೆ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿದ್ದು ಮರಣ ಹೊಂದಿದ್ದಾರೆ.

ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್.2018ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಐದು ವರ್ಷಗಳಿಂದ ನಾಗರಿಕ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್.

ಹೃದಯಾಘಾತವಾದ ಬೆನ್ನಲ್ಲೇ ಚಂದ್ರಶೇಖರ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆ ಚಂದ್ರಶೇಖರ ಅವರಿಗೆ  ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group