spot_img
spot_img

ಬಸವರಾಜ ಕಟ್ಟೀಮನಿ ಪುಣ್ಯಸ್ಮರಣೆ ನಿಮಿತ್ತ ವಿಶೇಷ ಉಪನ್ಯಾಸ

Must Read

spot_img
- Advertisement -

ಮೂಡಲಗಿ: ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಹಾಗೂ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು  ಇವರ ಸಹಯೋಗದಲ್ಲಿ “ಬಸವರಾಜ ಕಟ್ಟಿಮನಿ ಪುಣ್ಯಸ್ಮರಣೆ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ” ಬುಧವಾರ ಮುಂಜಾನೆ ೧೦ ಗಂಟೆಗೆ ಜರುಗಲಿದೆ.

ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಚೇರ್ಮನ್ನರಾದ ಬಸಗೌಡ ಪಾಟೀಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.  ಕಟ್ಟಿಮನಿ ಪ್ರತಿಷ್ಠಾನದ ಸದಸ್ಯ ಸಂಚಾಲಕರಾದ ಪ್ರೊ. ಚಂದ್ರಶೇಖರ್ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಗವಾಡದ ಶಿವಾನಂದ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಆನಂದಕುಮಾರ ಜಕ್ಕಣ್ಣವರ ಅವರು ಬರೆದಂತೆ ಬದುಕಿದ, ಬದುಕಿದಂತೆ ಬರೆದ ಕಟ್ಟೀಮನಿ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಟ್ಟಿಮನಿ ಪ್ರತಿಷ್ಠಾನದ ಸದಸ್ಯರಾದ ಶಿವಕುಮಾರ್ ಕಟ್ಟಿಮನಿ ಹಾಗೂ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿರುವರು ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಸವರಾಜ ಪತ್ತಾರ ಅವರಿಗೆ ಸನ್ಮಾನ

ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...
- Advertisement -

More Articles Like This

- Advertisement -
close
error: Content is protected !!
Join WhatsApp Group