spot_img
spot_img

ಕನಕದಾಸರ ಬದುಕಿನ ಮಜಲುಗಳು ಯುವಸಮುದಾಯಕ್ಕೆ ತಲುಪಲಿ – ಸಾಹಿತಿ ಮಾರ್ತಾಂಡಪ್ಪ ಕತ್ತಿ

Must Read

- Advertisement -

ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ ಭೇದ ದೂರ ಮಾಡಿ ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಮಹಾನ್ ಕೀರ್ತಿನಕಾರ ಕನಕದಾಸರ ಆದರ್ಶ ಯುವ ಪೀಳಿಗೆಗೆ ಮಾದರಿ. ಅವರ ಬದುಕಿನ ಮಜಲುಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯ ಆಗಬೇಕು ಎಂದು ಕಸಾಪ ತಾಲೂಕ ಗೌರವ ಕಾರ್ಯದರ್ಶಿ, ಸಾಹಿತಿ ಮಾರ್ತಾಂಡಪ್ಪ ಕತ್ತಿ ಹೇಳಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಧಾರವಾಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಧಾರವಾಡ ಇವರ ಸಹಯೋಗದಲ್ಲಿ ಕನಕ ಜಯಂತಿ ಅಂಗವಾಗಿ ಕಸಾಪ ಸಭಾಭವನದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಬದುಕಿನ ಕುರಿತು ಉಪನ್ಯಾಸ ಮಾಡಿ ಮಾತನಾಡುತ್ತಾ ಅಸಮಾನತೆ ತುಂಬಿದ್ದ ಸಮಾಜದಲ್ಲಿ, ‘ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂದು ಜನರನ್ನು ಎಚ್ಚರಿಸಿದ ಕನಕದಾಸರು ತಮ್ಮ ಜಾಗೃತ ಕೀರ್ತನೆಗಳ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣರಾದರು. ಭಕ್ತಿ ಮಾರ್ಗದತ್ತ ಜನರನ್ನು ಕೊಂಡೊಯ್ದ ಕನಕದಾಸರ ಮೌಲ್ಯಯುತ ಕೀರ್ತನೆಗಳ ಸಾರವನ್ನು ಎಲ್ಲರೂ ಅರಿಯಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅಸಮಾನತೆ ವಿರುದ್ಧ ಹೋರಾಡಿದ ದಾರ್ಶನಿಕರ ಪಟ್ಟಿಗೆ ಕನಕದಾಸರು ಸೇರುತ್ತಾರೆ. ಇವರು ಸಮಾನತೆಗಾಗಿ ಇಡೀ ಬದಕನ್ನೆ ಸವೆಸಿದವರು ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಂಡು ಬದುಕಬೇಕು ಎಂದು ಹೇಳಿದರು.

- Advertisement -

ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ ಜಿನದತ್ತ ಹಡಗಲಿ ಮತ್ತು ಕೆ ಎಸ್ ಕೌಜಲಗಿ, ತಾಲೂಕಾ ಕಸಾಪ ಗೌರವ ಕಾರ್ಯದರ್ಶಿ ಉಮಾ ಬಾಗಲಕೋಟ ಇದ್ದರು.

ಗಾಯಕರಾದ ಬಸವರಾಜ ಗೊರವರ,ಪ್ರೇಮಾನಂದ ಶಿಂಧೆ, ಮೇಘಾ ಹುಕ್ಕೇರಿ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು.

ತಾಲೂಕಾ ಅಧ್ಯಕ್ಷರಾದ ಮಹಾಂತೇಶ ನರೇಗಲ್ಲ ನಿರೂಪಿಸಿದರು, ಪ್ರಮೀಳಾ ಜಕ್ಕಣ್ಣವರ ಸ್ವಾಗತಿಸಿದರು. ಉಮಾ ಬಾಗಲಕೋಟ ವಂದಿಸಿದರು.

- Advertisement -

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಘಟಕರಾದ ಎಫ್ ಬಿ ಕಣವಿ, ಶಾಂತವೀರ ಬೇಟಗೇರಿ, ಡಾ ಶರಣಮ್ಮಗೋರೆಬಾಳ, ಎಸ್ ಎಮ್ ದಾನಪ್ಪಗೌಡರ ಸುಮಂಗಲಾ ದಂಡಿನ, ಗೀತಾ ಕುಲಕರ್ಣಿ, ಗಂಗಾಧರ ಗಾಡದ, ಉದಯಚಂದ ದಿಂಡವಾರ, ಎಮ್ ಪಿ ಕುಂಬಾರ ,ಸಿದ್ದರಾಮ ಹಿಪ್ಪರಗಿ , ಗೀತಾ ಕುಲಕರ್ಣಿ,
ಸುನಂದಾ ಯಡಾಲ್,ಮುಂತಾದವರು ಇದ್ದರು

- Advertisement -
- Advertisement -

Latest News

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ನಿಧನ

ಹೊಸದೆಹಲಿ - ಭಾರತದ ೧೩ ನೇ ಪ್ರಧಾನ ಮಂತ್ರಿಯಾಗಿದ್ದ ಆರ್ಥಿಕ ತಜ್ಞ ಡಾ. ಮನಮೋಹನ ಸಿಂಗ್ ನಿಧನರಾಗಿದ್ದಾರೆ ೧೯೭೨ ರಲ್ಲಿ ಆರ್ಥಿಕ ಸಲಹೆಗಾರ,  ೧೯೭೬ ರಿಂದ ೧೯೮೦...
- Advertisement -

More Articles Like This

- Advertisement -
close
error: Content is protected !!
Join WhatsApp Group