ಜಿಲ್ಲಾ ಕೇಂದ್ರಗಳು ಹೆದ್ದಾರಿಗಳಿಂದ ೧೦ ಕಿ ಮೀ ದೂರ – ಈರಣ್ಣ ಕಡಾಡಿ ಮಾಹಿತಿ

Must Read

ಮೂಡಲಗಿ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ರಾಷ್ಟ್ರೀಯ ಹೆದ್ದಾರಿಯಿಂದ 10 ಕಿ.ಮೀ ದೂರದ ರಸ್ತೆಗೆ ಸಂಪರ್ಕ ಹೊಂದಿವೆ. ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಜಿಲ್ಲಾ ಕೇಂದ್ರಗಳಿಂದ ರಾಷ್ಟ್ರೀಯ ಹೆದ್ದಾರಿಗೆ ರಸ್ತೆ ಸಂಪರ್ಕ ಕಲ್ಪಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇಶದಲ್ಲಿ 2014 ರಲ್ಲಿ ರಾಷ್ಟ್ರೀಯ ಹೆದ್ದಾರಿ 91,287 ಕಿಮೀ ನಿರ್ಮಾಣವಾಗಿತು. ಪ್ರಸ್ತುತ 1,46,195 ಕಿ.ಮೀ. ರಸ್ತೆ ನಿರ್ಮಾಣವಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ 2013-14ರಲ್ಲಿ 31,130 ಕೋಟಿ ರೂ. ಅನುದಾನ ನೀಡಲಾಗಿತ್ತು. ಪ್ರಸ್ತುತ 2024-25ರಲ್ಲಿ 2,84,000 ಕೋಟಿ ರೂ. ಅನುದಾನವನ್ನು ಹೆಚ್ಚಿಗೆ ಮಾಡಿ ರಾಷ್ಟ್ರೀಯ ಹೆದ್ದಾರಿಗಳ ಗುಣಮಟ್ಟ ಮತ್ತು ವಿಸ್ತಾರದಲ್ಲಿ ಗಣನೀಯ ಸುಧಾರಣೆಯಾಗಿದೆ.

ದೇಶದ 784 ಜಿಲ್ಲಾ ಕೇಂದ್ರಗಳನ್ನು 746 ರಾಷ್ಟ್ರೀಯ ಹೆದ್ದಾರಿಗಳು 10 ಕಿ.ಮೀ ದೂರದಲ್ಲಿ ಪ್ರವೇಶಿಸಬಹುದು. ಈ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ನಿರ್ವಹಣೆ ರಸ್ತೆ, ಸಂಚಾರ ಮತ್ತು ಚಾಲಕರ ಲಭ್ಯತೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಲಾಜಿಸ್ಟಿಕ್ ದಕ್ಷತೆಯ ಮೂಲಸೌಕರ್ಯ ಮತ್ತು ಸಾರಿಗೆ ನಿಯಂತ್ರಿತ ರಾಷ್ಟ್ರೀಯ ಹೆದ್ದಾರಿಗಳು ಮತ್ತು 4-ಲೇನ್ ಹಾಗೂ 6-ಲೇನ್ ರಸ್ತೆಗಳ ನಿರ್ಮಾಣದ ಬಗ್ಗೆಯೂ ಸರ್ಕಾರ ಗಮನಹರಿಸುತ್ತಿದೆ.

ಕರ್ನಾಟಕ ರಾಜ್ಯವನ್ನು ಒಳಗೊಂಡಂತೆ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಿದೆ ಮತ್ತು ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಿಗೆ ಪ್ರವೇಶಿಸಲು ಕಾರಣವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group