- Advertisement -
ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅಜಾತಶತ್ರುಗಳಾಗಿದ್ದ ಅವರು, ಕಿರಿಯ ರಾಜಕಾರಣಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಡೆ ನುಡಿ, ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯವಾಗಿದೆ ಎಂದು ಸ್ಮರಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಡಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.