spot_img
spot_img

ವಂದೇ ಭಾರತ ಎಕ್ಸ್ ಪ್ರೆಸ್ ಘಟಪ್ರಭಾಕ್ಕೆ ನಿಲುಗಡೆ

Must Read

spot_img
- Advertisement -

ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಇತ್ತಿಚೆಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹಾಗೂ ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿತ್ತು. ನನ್ನ ಮನವಿಗೆ ಸ್ಪಂದಿಸಿ ಶೀಘ್ರವಾಗಿ ರೈಲು ನಿಲುಗಡೆ ಆದೇಶ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಹಾಗೂ ಸಹಕಾರ ನೀಡಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಅವರುಗಳಿಗೆ ಈ ಭಾಗದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಶೀಘ್ರದಲ್ಲಿ ರೈಲು ನಿಲುಗಡೆಗೆ ದಿನಾಂಕ ತಿಳಿಸಲಾಗುವುದು ಎಂದು ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ನವ ಪೌರೋಹಿತ್ಯ ಪೋಷಿಸುವ ನಮ್ಮ ಮಠಾಧೀಶರು ಮಾತೆ ಅಕ್ಕ ಸ್ವಾಮಿಗಳು

ಬಸವಣ್ಣ ಜಗವು ಕಂಡ ಶ್ರೇಷ್ಠ ಸಮಾಜವಾದಿ ಚಿಂತಕ. ಯಾವುದೇ ಶ್ರೇಣೀಕೃತವಿಲ್ಲದ ಸಮಾನತೆ ಸಮತೆ ಪ್ರೀತಿ ಶಾಂತಿಯನ್ನು ಮೈಗೂಡಿಸಿಕೊಂಡ ಹೊಸ ಲಿಂಗಾಯತ ಧರ್ಮವನ್ನು ಶರಣರು ಸ್ಥಾಪಿಸಿದರು. ಭಕ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group