ಕೇಂದ್ರ ಕೃಷಿ ಸಚಿವರ ಭೇಟಿಯಾದ ಈರಣ್ಣ ಕಡಾಡಿ

Must Read

ಮೂಡಲಗಿ: ದೇಶದ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದ್ರಾಕ್ಷಿ ಬೆಳಗಾರರ ನಿಯೋಗದೊಂದಿಗೆ ಕೃಷಿ ಭವನದಲ್ಲಿ ಭೇಟಿಯಾಗಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.

ಬರುವ ದಿನಗಳಲ್ಲಿ ದ್ರಾಕ್ಷಿ ಬೆಳಗಾರರ ಎಲ್ಲ ಸಮಸ್ಯೆಗಳ ನಿವಾರಣೆಗಾಗಿ ಅತಿ ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಈ ನಿಯೋಗದಲ್ಲಿ ಅಥಣಿ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ, ಚಿಕ್ಕೋಡಿ ಜಿಲ್ಲಾ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಮುದಕನ್ನವರ್, ದ್ರಾಕ್ಷಿ ಬೆಳಗಾರರಾದ ಅಪ್ಪಾಸಾಬ್ ತೇರದಾಳ, ಶ್ರೀಕಾಂತ್ ಮಕಾನಿ, ಸುಭಾಸ ಮೋರೆ, ಸುರೇಶ ಅವಟಿ, ಪ್ರಕಾಶ ಪಾಟೀಲ್ ಉಪಸ್ಥಿತರಿದ್ದರು.

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...

More Articles Like This

error: Content is protected !!
Join WhatsApp Group