spot_img
spot_img

ತಡವಾಗಿ ನಾಮಪತ್ರ ಹಿಂತೆಗೆತ : ಅಧಿಕಾರಿ ವಿರುದ್ಧ ಕ್ರಮಕ್ಕೆ ಹೊಳೆಪ್ಪ ಶಿವಾಪೂರ ಆಗ್ರಹ

Must Read

spot_img
- Advertisement -

ಮೂಡಲಗಿ – ಮೂಡಲಗಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳಲು ಸಮಯ ಮಧ್ಯಾಹ್ನ ೩ ಗಂಟೆಗೆ ಮುಗಿದಿದ್ದರೂ ಸಂಜೆಯವರೆಗೂ ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶ ನೀಡಿದ ಸಹಕಾರ ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೊಳೆಪ್ಪ ಶಿವಾಪೂರ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸಕ್ತ ಮೂಡಲಗಿಯ ಪಿಕೆಪಿಎಸ್ ಸೊಸಾಯಿಟಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು ಇದೇ ದಿ. ೨೯ ರಂದು ಮತದಾನ ಇರುತ್ತದೆ. ಆಡಳಿತ ಮಂಡಳಿಗಾಗಿ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ದಿ. ೨೩ ರಂದು ಮಧ್ಯಾಹ್ನ ೩ ಗಂಟೆಯವರೆಗೆ ಸಮಯವಿತ್ತು  ಆದರೆ ಸಹಕಾರಿ ಚುನಾವಣಾಧಿಕಾರಿಗಳು ಸಾಯಂಕಾಲ ೫.೩೦ ರವರೆಗೂ ನಾಮಪತ್ರ ಹಿಂತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಚುನಾವಣಾ ಅಧಿಕಾರಿಯಾಗಿದ್ದ ಎ ಆರ್ ಕರಿಗಾರ ಅವರು ಈ ವಿಷಯದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಅಲ್ಲದೆ ಚುನಾವಣಾ ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಆದ್ದರಿಂದ ಸಹಕಾರ ಸಂಘಗಳ ನಿಬಂಧಕರು, ಉಪ ನಿಬಂಧಕರು ಕರಿಗಾರ ಅವರ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಹೊಳೆಪ್ಪ ಶಿವಾಪೂರ ಆಗ್ರಹಿಸಿದ್ದಾರೆ.

- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group