ವಿವೇಕಾನಂದರದು ಸ್ಫೂರ್ತಿದಾಯಕ ಜೀವನ – ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಬೆಳಗಾವಿ – ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ, ಪ್ರಗತಿಗೆ ಸೇವೆ ಸಲ್ಲಿಸಿದ್ದರು ಎಂದು ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಬೋಧಿಸಿದ ತತ್ವ-
ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ತಮ್ಮ ಇಡೀ ಜೀವನವನ್ನು ಸಮಾಜಕ್ಕೆ ಧಾರೆ ಎರೆದಿರುವ ಅವರು ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ, ಉತ್ತಮ ಸಮಾಜ ನಿರ್ಮಾಣಕ್ಕಾಗಿ ತಮ್ಮ ಗುರುಗಳ ಹೆಸರಿನಲ್ಲಿ ರಾಮಕೃಷ್ಣ ಮಿಷನ್ ಸ್ಥಾಪಿಸಿ ಆಧ್ಯಾತ್ಮಿಕ ಚಿಂತನೆಯನ್ನು ಧಾರೆ ಎರೆದಿದ್ದಾರೆ ಎಂದು ಹೇಳಿದ ಅವರು, ಸ್ವಾಮಿ ವಿವೇಕಾನಂದರ ಜಯಂತಿಯನ್ನು ಯುವಕರಿಗೆ ಅರ್ಪಿಸಿ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಮಾಜಿ ಶಾಸಕರಾದ ಮಹಾಂತೇಶ ದೊಡಗೌಡರ, ಜಗದೀಶ್ ಮೆಟಗುಡ್ಡ, ಸಂಜಯ ಪಾಟೀಲ, ವಿಶ್ವನಾಥ್ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ್ ಪಾಟೀಲ್, ರಾಣಿ ಸರಕಾರ ಧನಶ್ರೀ ಸರದೇಸಾಯಿ, ವಿವಿಧ ಮಂಡಲಗಳ ಅಧ್ಯಕ್ಷರುಗಳು, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group