ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ನರಾಧಮನ ಬಂಧನ

Must Read

ಬೆಂಗಳೂರು-  ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲನ್ನು ನರಾಧಮನೊಬ್ಬ ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ.

ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್​ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ​ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಏನಿದು ಘಟನೆ :

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ಇಂಥದಕ್ಕೆಲ್ಲ ಸರ್ಕಾರದ ಬೆಂಬಲ ಇರದೇ ಮಾಡಲು ಸಾಧ್ಯವಿಲ್ಲ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

ಸಾರ್ವಜನಿಕರೂ ಈ ದುಷ್ಕೃತ್ಯವನ್ನು ಖಂಡಿಸಿದ್ದು ಸಾಮಾನ್ಯರು ಇದನ್ನು ಮಾಡಲು ಸಾಧ್ಯವಿಲ್ಲ ಇದಕ್ಕೆ ದೊಡ್ಡವರ ಬೆಂಬಲ ಇದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group