ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರ ಬಿಡುಗಡೆ

Must Read

ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ವೇಳೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನ್ನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಬಿಇಒ ಅಜೀತ ಮನ್ನಿಕೇರಿ, ಹೆಸ್ಕಾಂ ಅಧಿಕಾರಿ ಎಂ.ಎಸ್.ನಾಗನ್ನವರ, ಶಿರಸ್ತೆದಾರ ಪರಸಪ್ಪ ನಾಯಕ, ತಾ.ಪಂ ಸಹಾಯಕ ನಿರ್ದೇಶಕರಾದ ಸಂಗಮೇಶ ರೊಡ್ಡನ್ನವರ, ಚಂದ್ರಶೇಖರ ಬಾರ್ಕಿ, ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group