spot_img
spot_img

ನೇತಾಜಿ ಸುಭಾಚ ಚಂದ್ರರ 128 ನೇ ಜಯಂತಿ ಆಚರಣೆ

Must Read

spot_img
      ರಾಷ್ಟ್ರೀಯ ಮಹಾನ್ ಹೋರಾಟಗಾರರಾದ “ನೇತಾಜಿ ಸುಭಾಷ್ ಚಂದ್ರ ಬೋಸ್‍ರವರ 128ನೇ ಜಯಂತಿ ಆಚರಣೆ ಹಾಗೂ ಗಾಂಧೀಜಿಯವರ ವಿಚಾರಧಾರೆ ಪ್ರಸ್ತುತಿ”  ಕಾರ್ಯಕ್ರಮವನ್ನು ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಅತ್ಯಂತ ಸಂಭ್ರಮದಿಂದ ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು.
    ದೇಶಭಕ್ತಿ ಗೀತೆಯ ನಂತರ ಮುಖ್ಯ ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಸುಭಾಷ್ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
   ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಮತಿ ಸಗರ್ ರವರು ಸ್ವಾಗತ ಭಾಷಣವನ್ನು ಮಾಡಿದ ನಂತರ ವಿದ್ಯಾರ್ಥಿಗಳಿಂದ  ದೇಶಾಭಿಮಾನವನ್ನು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು
     ಇದರ ಅಂಗವಾಗಿ ವಿದ್ಯಾರ್ಥಿಗಳು ಗಾಂಧೀಜಿಯವರ ಬಾಲ್ಯದಲ್ಲಿ ನಡೆದ ಘಟನೆಗಳು ಹಾಗೂ ಸ್ವದೇಶಿ ಚಳವಳಿಯನ್ನು ಕುರಿತ ನಾಟಕವನ್ನು ಅಭಿನಯಿಸಿದರು. ಅಲ್ಲದೆ ಅಸ್ಪೃಶ್ಯತೆಯನ್ನು ಕುರಿತ ಗಾಂಧೀಜಿಯವರ ಚಿಂತನೆಯನ್ನು ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ಸರ್ವೋದಯ ಮಂಡಲದ ಅಧ್ಯಕ್ಷ ಡಾ. ಹೆಚ್.ಎಸ್. ಸುರೇಶ್ ಹಾಗೂ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿಯವರು ಗಾಂಧೀಜಿಯವರ ಕುರಿತ ವಿಚಾರಧಾರೆಯನ್ನು ಸರಳಸುಂದರ ಶೈಲಿಯಲ್ಲಿ ಪ್ರಸ್ತುತಪಡಿಸಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ಮಹಾನ್ ಹೋರಾಟಗಾರರ ಬಗ್ಗೆ ಅರಿವು ಮೂಡುವುದರ ಜೊತೆಗೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು.
- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group