ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿರುವ SC, ST ಆಯ್ದ ಮಕ್ಕಳಿಗೆ 2024-25 ನೇ ಸಾಲಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ದರ್ಶನ ಪ್ರವಾಸ ಹಮ್ಮಿಕೊಳ್ಳಲಾಯಿತು.
ಸದರಿ ಕಾರ್ಯಕ್ರಮಕ್ಕೆ ದಿನಾಂಕ 25 ರಂದು ಮುಂಜಾನೆ 8.30 ಕ್ಕೆ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ, ಸವದತ್ತಿ ತಾಲೂಕಿನ ದಂಡಾಧಿಕಾರಿಗಳಾದ ಮಲ್ಲಿಕಾರ್ಜುನ ಹೆಗ್ಗನ್ನವರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆನಂದ ಬಡಕುಂದ್ರಿ ಹಾಗೂ ಸವದತ್ತಿ ತಾಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ ಕಾಜಗಾರ ಶ್ರೀ ಅರ್ಜುನ ಕಾಮಣ್ಣವರ ಶಿಕ್ಷಣ ಸಂಯೋಜಕರು,ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಿರಣ ಕುರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಳಾದ ರತ್ನ ಸೇತಸನದಿ. ಸಮೂಹ ಸಂಪನ್ಮೂಲ ವ್ಯಕ್ತಿ ಗಳಾದ ಕುಶಾಲ್ ಮುದ್ದಾಪುರ. ರವಿ ನಲವಡೆ,ರಾಮಚಂದ್ರಪ್ಪ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.