ಗುಬ್ಬೆವಾಡ  ಚೌಡೇಶ್ವರಿ ದೇವಸ್ಥಾನಲ್ಲಿ ನರೇಗಾ ದಿನಾಚರಣೆ

Must Read

ಸಿಂದಗಿ; ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಧಿನಿಯಮ ೨೦೦೫ ರಲ್ಲಿ ಜಾರಿಗೆ ಬಂದಿತು ಹಾಗೂ ಇದು ಕೇವಲ ಒಂದು ಯೋಜನೆ ಆಗದೆ ಕಾಯ್ದೆಯಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ ಅಗ್ನಿ ಹೇಳಿದರು.

ತಾಲೂಕಿನ ಗುಬ್ಬೆವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರಗಿ ಗ್ರಾಮದ ಚೌಡೇಶ್ವರಿ ದೇವಸ್ಥಾನಲ್ಲಿ ಹಮ್ಮಿಕೊಂಡ ನರೇಗಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಲ್ಲಿಂದ ಇಲ್ಲಿವರೆಗೂ ಜಾರಿಯಾಗಿ ೨೦ ವರ್ಷ ಕಳೆಯಿತು. ಇದರ ಉದ್ದೇಶವೆಂದರೆ ಗ್ರಾಮೀಣ ಜನರಿಗೆ ಮತ್ತು ಹಿಂದುಳಿದ ಎಲ್ಲ ಸಮುದಾಯದ ಸಮಾಜದ ಕಟ್ಟಕಡೆಯ ಕೂಲಿ ಕಾರ್ಮಿಕರ ಕುಟುಂಬಕ್ಕೆ ವರ್ಷಕ್ಕೆ ಕನಿಷ್ಠ ೧೦೦ ದಿನ ಕೆಲಸ ಒದಗಿಸುವದು ಇದರ ಉದ್ದೇಶ ಮತ್ತು ಜನರ ಜೀವನ ಗುಣಮಟ್ಟ ಸುಧಾರಿಸುವುದಾಗಿದೆ. ಈ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳು, ರೇಷ್ಮೆ ಬೆಳೆ, ಅರಣ್ಯ ಇಲಾಖೆಯಿಂದ ಸಹಾಯಧನ ಪಡೆಯಬಹುದು. ಆದ್ದರಿಂದ ತಾವುಗಳು ಇದರ ಸದುಪಯೋಗ ಪಡೆಯಿರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನರೇಗಾ ದಡಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ ೧೦೦ ದಿನ ಪೂರೈಸಿದ ೧೦ ಜನರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಪ್ರತಿನಿಧಿ ನಿತ್ಯಾನಂದ ಕಟ್ಟಿಮನಿ, ಸದಸ್ಯರಾದ ಬಸವರಾಜ ಚಾವರ, ಪರಸು ಕೋಟಾರಗಸ್ತಿ, ಕಾರ್ಯದರ್ಶಿ ಈರಣ್ಣ ಮಾಗಣಗೇರಿ, ತಾಲೂಕು ಐ ಇ ಸಿ ಸಂಯೋಜಕರು ಭೀಮರಾಯ ಚೌಧರಿ, ಗ್ರಾಮ ಕಾಯಕ ಮಿತ್ರ ಲಕ್ಷ್ಮೀ ಮಾದರ, ನರೇಗಾ ಕೂಲಿಕರರ ಕಾಯಕ ಬಂಧು ಶಾಂಭವಿ ಕೊಟರಗಸ್ತಿ, ಸಿದ್ದು ಮಾದರ, ಸಿಬ್ಬಂದಿಗಳು, ಸಾರ್ವಜನಿಕರು ಮತ್ತು ನರೇಗಾ ಕೂಲಿ ಕಾರ್ಮಿಕರು ಹಾಜರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group