ದೆಹಲಿಯಲ್ಲಿ ಅಭಿವೃದ್ಧಿ ಪರ್ವ ಆರಂಭ – ಈರಣ್ಣ ಕಡಾಡಿ

Must Read

ಮೂಡಲಗಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನಡೆ ಉಂಟಾಗಿದೆ. ಹೀಗಾಗಿ ಬಿಜೆಪಿಗೆ ಆರ್ಶೀವದಿಸಿದ ಮತದಾರ ಬಂಧುಗಳಿಗೆ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು ನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಶನಿವಾರ ಫೆ-08 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಾರ್ಟಿಯ ಸಚಿವ ಸಂಪುಟದ ಹಲವಾರು ಸಚಿವರು ಭ್ರಷ್ಟಾಚಾರ ಕಳಕಿಂತರಾಗಿ ಜೈಲು ಪಾಲಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿ. ಸುಳ್ಳಿನ ಅರಮನೆಯನ್ನೇ ನಿರ್ಮಿಸಿ ಅಧಿಕಾರಕ್ಕೆ ಬಂದ ಅರವಿಂದ್ ಕ್ರೇಜಿವಾಲ್ ಅವರನ್ನು ದೆಹಲಿ ಜನ ತಿರಸ್ಕರಿಸಿದ್ದು‌, ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಜನ ಆಯ್ಕೆ ಮಾಡುವ ಮೂಲಕ ದೆಹಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದರು.

ಹೀಗಾಗಿ ಈ ಗೆಲುವಿಗೆ ಕಾರಣೀಭೂತರಾದ ದೆಹಲಿ ಮತದಾರ ಬಂಧುಗಳಿಗೂ ಹಾಗೂ ಗೆಲುವಿಗೆ ಪರಿಶ್ರಮ ವಹಿಸಿದ ಬಿಜೆಪಿ ದೆಹಲಿ ಕಾರ್ಯಕರ್ತರಿಗೂ ಹೃತ್ಪೂರ್ವಕವಾದ ಧನ್ಯವಾದಗಳು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group