ಕನ್ನಡ ಭಾಷೆ ಬಳಸಿದವರ ಮೇಲೆ ಹಲ್ಲೆಗೆ ಡಾ.ಭೇರ್ಯ ರಾಮಕುಮಾರ್ ಖಂಡನೆ

Must Read

ಬೆಳಗಾವಿಯಲ್ಲಿ ಕನ್ನಡ ಭಾಷೆ ಬಳಸಿದ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಅನ್ಯ ಭಾಷಿಗರ ಕೃತ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಭೇರ್ಯ ರಾಮ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ.ಅಲ್ಲಿ ಕನ್ನಡ ಭಾಷೆಗೇ ಮೊದಲ ಆದ್ಯತೆ.ಕನ್ನಡ ವಿರೋಧಿ ಕೃತ್ಯ ಎಸಗಿರುವವರ ಮೇಲೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳ ಬೇಕು.ಕರ್ನಾಟಕದ ಬಸ್ಸುಗಳ ಮೇಲೆ ದಾಳಿ ನಡೆಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕನ್ನಡ ನಾಡು ನುಡಿಯ ಮೇಲೆ ಆಗಾಗ್ಗೆ ಅಮಾನುಷ ಧಾಳಿ ನಡೆಯುತ್ತಿರುವುದು ಖಂಡನೀಯ. ಕರ್ನಾಟಕದಲ್ಲಿ ಇರುವವರು ಎಲ್ಲರೂ ಕನ್ನಡಿಗರೇ. ಕನ್ನಡ ನಾಡು ನುಡಿಗೆ ನುಡಿಗೆ ಗೌರವ ನೀಡದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳ ಬೇಕಾದ್ದು ಕರ್ನಾಟಕ ಸರ್ಕಾರದ ಕರ್ತವ್ಯ .ಕನ್ನಡ ಮಾತನಾಡುವ ವ್ಯಕ್ತಿಗಳ ಮೇಲೆ ಧಾಳಿ ಮಾಡುವ ವ್ಯಕ್ತಿಗಳನ್ನು ಉಗ್ರವಾಗಿ ಶಿಕ್ಷಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group