ಬೀದರ – ಮಹಾ ಕುಂಭಮೇಳಕ್ಕೆ ಹೋಗಿದ್ದಾ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿ ಆರು ಜನ ದುರ್ಮರಣ ಹೊಂದಿದ್ದು ಗಾಯಾಳುಗಳಾಗಿ ಆಸ್ಪತ್ರೆ ಸೇರಿದವರನ್ನು ಸಚಿವ ಈಶ್ವರ ಖಂಡ್ರೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಬದುಕುಳಿದ ಏಳು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ ಅಪಘಾತ ನಡೆದ ವಿವರಗಳನ್ನು ಪಡೆದುಕೊಂಡರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ವರದಿ : ನಂದಕುಮಾರ ಕರಂಜೆ, ಬೀದರ