ಭೂ ಕಬಳಿಕೆ ವಿರುದ್ಧ ರಾಜ್ಯ ಮಟ್ಟದ ವಿಚಾರ ಸಂಕಿರಣ

Must Read

ಬೆಂಗಳೂರು – ಲಕ್ಷಾಂತರ ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನುಗಳನ್ನು ಭೂ ಮಾಫಿಯಾದಿಂದ ಸಂರಕ್ಷಿಸುವಲ್ಲಿ ಸರ್ಕಾರ, ಸರ್ಕಾರಿ ಅಧಿಕಾರಿಗಳು, ನ್ಯಾಯಾಲಯ ಹಾಗೂ ಸಾರ್ವಜನಿಕರ ಪಾತ್ರ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ನಗರದ ಕನ್ನಡ ಭವನದಲ್ಲಿ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆಯನ್ನು ಮಾಜಿ ವಿಧಾನಸಭಾ ಅಧ್ಯಕ್ಷ ಕೆ ಬಿ ಕೋಳಿವಾಡ ವಹಿಸಿದ್ದರು.

ಉದ್ಘಾಟನೆಯನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿ ಎಚ್ ಪಿ ಸಂದೇಶ,ಮಾಜಿ ಶಾಸಕ ಹಾಗೂ ಕರ್ನಾಟಕ ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಎ ಟಿ ರಾಮಸ್ವಾಮಿ, ನ್ಯಾಯವಾದಿ ಎ ಆರ್ ಶಶಿಕುಮಾರ ಹಾಗೂ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಅಧ್ಯಕ್ಷ ಕೆ ಎಚ್ ರಾಮಲಿಂಗಾರೆಡ್ಡಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕರ್ತ ಸೋಮು ಪಾಟೀಲ ( ಮುರಳಿ ) ಸೇರಿದಂತೆ ಹಲವು ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group