ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Must Read

 

ಹಲಗಾ( ಬೆಳಗಾವಿ)- ಇಲ್ಲಿನ ಶ್ರೀಮತಿ ಜೆ. ಆರ್. ದೊಡ್ಡಣ್ಣವರ ಹೈಸ್ಕೂಲಿನ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಈಚೆಗೆ ಜರುಗಿತು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮಹಾವೀರ ಬೆಲ್ಲದ, ನಿವೃತ್ತ ಅಶೋಕ ಜಕ್ಕಣ್ಣವರ ಆಗಮಿಸಿದ್ದರು. ಬಾಹುಬಲಿ ಕಡೇಮನಿ ಅವರು ಅಧ್ಯಕ್ಷತೆ ವಹಿಸಿದ್ದರು.

‌   ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ತಲಾ 1000ರೂ. ನಗದು ಬಹುಮಾನ ನೀಡುವುದಾಗಿ ಅಶೋಕ ಜಕ್ಕಣ್ಣವರ ಅವರು ಘೋಷಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ, ಪತ್ರಕರ್ತ ಹಾಗೂ ಸ್ಪರ್ಧಾತ್ಮಕ ಪುಸ್ತಕಗಳ ಮಾರ್ಗದರ್ಶಕರಾಗಿರುವ ಅಶೋಕ ಚಿಕ್ಕಪರಪ್ಪಾ ಅವರು ಉಡುಗೊರೆಯಾಗಿ ಕೊಟ್ಟ ಪುಸ್ತಕಗಳನ್ನು 8, 9 ಹಾಗೂ 10ನೇ ತರಗತಿಯ 286 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಮುಖ್ಯಾಧ್ಯಾಪಕಿ ನಳಿನಿ ಪಾಟೀಲ ಉಪಸ್ಥಿತರಿದ್ದರು. ಶಿಕ್ಷಕ ಪ್ರಶಾಂತ ಪಾಟೀಲ ಕಾರ್ಯಕ್ರಮ ನಡೆಸಿಕೊಟ್ಟರು.

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group