ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯ ಮಹಿಳಾ ದಿನಾಚರಣೆಯ ಸಂಭ್ರಮಾಚರಣೆ

Must Read
        ಮಹಿಳಾ ದಿನಾಚರಣೆಯ ಅಂಗವಾಗಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಆಡಳಿತ ಮಂಡಳಿಯವರಿಂದ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
    ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಇದರಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.
   ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಗೀತ ಕಂದರಾಜೆಯವರು ಹಿತನುಡಿಗಳನ್ನು ನುಡಿದರು. ನಂತರ ಅವರ ನೇತೃತ್ವದಲ್ಲಿ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅವುಗಳಲ್ಲಿ ಅಂತ್ಯಾಕ್ಷರಿ, ಅಡುಗೆ ಸ್ಪರ್ಧೆ, ರಂಗೋಲಿ, ಹಲವು ರೀತಿಯ ಕ್ರೀಡಾಸ್ಪರ್ಧೆಗಳು ಹಾಗೂ ಉಡುಗೆ ತೊಡುಗೆಗಳ ಪ್ರದರ್ಶನದ  ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ಸುಮಾರು 40 ಕ್ಕೂ ಹೆಚ್ಚು ಸ್ಪರ್ಧಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
   ಏರೋಬಿಕ್ಸ್ ನೃತ್ಯ ಹಾಗೂ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಿಬ್ಬಂದಿಯವರು ಮಹಿಳಾ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಸಂಭ್ರಮಿಸಿದ್ದು ವಿಶೇಷವಾಗಿ ಕಂಡುಬಂದಿತು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಮತಿ ಮೇಡಂರವರು ಸಲ್ಲಿಸಿದ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.
Latest News

ಡಾ.ಮಹಾಂತೇಶ ಬೀಳಗಿ ಯುವಕರಿಗೆ ಸ್ಫೂರ್ತಿ – ಮೌಲಾಲಿ ಆಲಗೂರ

ಸಿಂದಗಿ: ಸ್ಪೂರ್ತಿದಾಯಕ ಮಾತುಗಳಿಂದ ಲಕ್ಷಾಂತರ ಸ್ಪರ್ಧಾತ್ಮಕ ಓದುಗರ ಕೀರ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ...

More Articles Like This

error: Content is protected !!
Join WhatsApp Group