ನೀರು ಮತ್ತು ನೈರ್ಮಲ್ಯ ವಿಷಯಗಳ ಕುರಿತು ವಸ್ತು ಪ್ರದರ್ಶನ

Must Read

ಬೆಳಗಾವಿ : ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರ ನಿರ್ದೇಶನದಂತೆ ಜಿಲ್ಲಾ ಪಂಚಾಯತ ಬೆಳಗಾವಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಳಗಾವಿ ಇವರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯ ಐ.ಇ.ಸಿ ಚಟುವಟಿಕೆಯಡಿ ನೀರು ಮತ್ತು ನೈರ್ಮಲ್ಯ ವಿಷಯಗಳ ಕುರಿತು ಜಾಗೃತಿ ಮೂಡಿಸಲು “ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ನಗರದ ಸಿಪಿಎಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಮೀ ಹೆಬ್ಬಾಳಕರ ಅವರ ಅಧ್ಯಕ್ಷತೆಯಲ್ಲಿ “ಅಂತಾರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ” ನಡೆಯಿತು. ಈ ದಿನಾಚರಣೆಯ ಅಂಗವಾಗಿ ವಿವಿಧ ಜಿಲ್ಲೆಯಿಂದ ಆಗಮಿಸಿದ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರು ಸ್ಟಾಲ್ ಹಾಕುವುದರ ಮೂಲಕ ತಮ್ಮ ಸ್ಥಳೀಯ ಮಟ್ಟದಲ್ಲಿ ಸಿದ್ದಪಡಿಸಿದ ವಸ್ತುಗಳನ್ನು ಮಾರಾಟ ಮಾಡಿದರು. ಒಟ್ಟಿನಲ್ಲಿ ಈ ಕಾರ್ಯಕ್ರಮದಲ್ಲಿ ಸುಮಾರು 30 ಸ್ಟಾಲ್ ಗಳು ಇದ್ದವು. ಅದರ ಜೊತೆಗೆ ಜಿಲ್ಲಾ ಪಂಚಾಯತ ಬೆಳಗಾವಿಯಿಂದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸುಮಾರು 700ಕ್ಕೂ ಹೆಚ್ಚು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅದೇ ರೀತಿ ಜಲ ಜೀವನ ಮಿಷನ್ ಯೋಜನೆಯ ಯೋಜನಾ ವ್ಯವಸ್ಥಾಪಕರು ಮತ್ತು ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯ ಎಲ್ಲ ಜಿಲ್ಲಾ ಸಮಾಲೋಚಕರು ಸೇರಿ ಯೋಜನೆ ಮಾಹಿತಿಯನ್ನು ಬಂದಂಥ ಜನಕ್ಕೆ ತಿಳಿಯಪಡಿಸಿದರು. ಮುಖ್ಯವಾಗಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Latest News

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು...

More Articles Like This

error: Content is protected !!
Join WhatsApp Group