ಕನ್ನಡ ಜಾನಪದ ಪರಿಷತ್ತಿನ ದಶಮಾನೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ

0
96

ಬೈಲಹೊಂಗಲ: ಕನ್ನಡ ಜಾನಪದ ಪರಿಷತ್ತು ತಾಲೂಕಾ ಘಟಕ ಬೈಲಹೊಂಗಲ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೈಲಹೊಂಗಲ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಕನ್ನಡ ಜಾನಪದ ಪರಿಷತ್ತಿನ ದಶಮಾನೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೈಲಹೊಂಗಲ ಶಾಸಕರಾದ ಮಹಾಂತೇಶ ಎಸ್.ಕೌಜಲಗಿ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಚಾರ್ಯರಾದ ಬಿ. ಕೆ. ಮದವಾಲ ಅಧ್ಯಕ್ಷತೆ ವಹಿಸುವರು.

ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ, ಐ.ಸಿ.ಸಿ.ಆರ್ ಸದಸ್ಯರಾದ ಡಾ. ಜಾನಪದ ಎಸ್. ಬಾಲಾಜಿ, ಕನ್ನಡ ಜಾನಪದ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ.ಕೆ. ಎಸ್. ಕೌಜಲಗಿ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಶ್ರೀಶೈಲ ಮೆಟಗುಡ್ಡ, ಬೆಳಗಾವಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಮೋಹನ ಗುಂಡ್ಲೂರ, ಬೈಲಹೊಂಗಲ ತಾಲೂಕು ಕನ್ನಡ ಜಾನಪದ ಪರಿಷತ್ತಿನ ಗೌರವಾಧ್ಯಕ್ಷರು, ಹಿರಿಯ ಪತ್ರಕರ್ತರಾದ ಈಶ್ವರ ಹೋಟಿ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಲಾವಿದರು, ಸಾಹಿತಿಗಳು, ಎಲ್ಲ ಕನ್ನಡ ಮನಸ್ಸುಗಳು ಅಗಮಿಸುವಂತೆ ಬೈಲಹೊಂಗಲ ತಾಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ರು. ಕೊಪ್ಪದ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಸ. ಕೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here