ಬಸವನಗುಡಿ ಶಾಲೆಗೆ ರಾಜ್ಯ ಮಟ್ಟದ ಉತ್ತಮ ಶಾಲೆ ಗೌರವ ಪ್ರಶಸ್ತಿ

Must Read

ಸವದತ್ತಿ ಃ ತಾಲೂಕಿನ ಯರಗಟ್ಟಿ ಸಮೀಪದ ಬಸವನಗುಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಾಲೆ ಪ್ರಶಸ್ರಿ ನೀಡಲಾಯಿತು.

ಆರೂಢ ಭಾರತಿ ಸ್ವಾಮೀಜಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್,ಉಪಾಧ್ಯಕ್ಷ ಟಿ.ತ್ಯಾಗರಾಜು, ಕಾವ್ಯಶ್ರೀ ಚಾರಿಟೆಬಲ್ ಅಧ್ಯಕ್ಷ ಜಿ.ಶಿವಣ್ಣ, ಚೇತನ ಪೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ, ಭಾಷಾ ಅಲ್ಪಸಂಖ್ಯಾತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಲ್.ಐ.ಲಕ್ಕಮ್ಮನವರ, ಸಾಹಿತಿ ಪಂಡಿತ ಅವುಜಿ, ಅಪ್ನಾದೇಶ ಸಂಘಟನೆಯ ರಾಜ್ಯಾಧ್ಯಕ್ಷ ವೈ.ಬಿ.ಕಡಕೋಳ, ಡಾ.ವೀಣಾ, ಲೂಸಿ ಸಾಲ್ಡಾನಾ, ನಟ ಚಿಕ್ಕ ಹೆಜ್ಜಾಜೆ ಮಹದೇವ ಮೊದಲಾದವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಾಲೆ ಪ್ರಶಸ್ತಿಯನ್ನು ಶಾಲೆಯ ಮುಖ್ಯ ಶಿಕ್ಷಕ ವಿಜಯಕುಮಾರ ಮೆಳವಂಕಿಯವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಲಿಕಲಿ ವಿಷಯದ ರಾಜ್ಯಮಟ್ಟದ ಸಂಪನ್ಮೂಲ ಶಿಕ್ಷಕ ಮನೋಹರ ಚೀಲದ ಸವದತ್ತಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿ ಶಿವಾನಂದ ಮಿಕಲಿ, ಶಿಕ್ಷಕರಾದ ಎಲ್ ಎಂ ಕುಮಕಾಗೋಳ, ಟಿ.ಬಿ.ಚೌರಡ್ಡಿ, ಗುರು,ಕೊಳವಿ ಮೊದಲಾದವರು ಉಪಸ್ಥಿತರಿದ್ದರು.

ಚಂದ್ರಶೇಖರ ಮಾಡಲಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿ.ಶಿವಣ್ಣ ಸ್ವಾಗತಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group