ಕರ್ತವ್ಯನಿಷ್ಠೆ ಹಾಗೂ ಪ್ರೀತಿಯಿಂದ ನಿಸ್ವಾರ್ಥ ಸೇವೆಯನ್ನು ಮಾಡಿದ ಮನೋಳಿಯವರು -ವಿಶ್ವಾಸ ವೈದ್ಯ

Must Read

ಸವದತ್ತಿ : ತಮ್ಮ ಕರ್ತವ್ಯನಿಷ್ಠೆ ಹಾಗೂ ಪ್ರೀತಿಯಿಂದ ನಿಸ್ವಾರ್ಥ ಸೇವೆಯನ್ನು ಮಾಡಿದ ಮನೋಳಿ ಅವರ ಕುಟುಂಬ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧ.ಬಾಲ್ಯದ ನನ್ನ ನೆನಪುಗಳ ಸ್ಮರಣೆ ಈ ಸಂದರ್ಭದಲ್ಲಿ ಮರುಕಳಿಸುತ್ತಿದೆ.ಜೀವನದಲ್ಲಿ ದೇವರು ಆರೋಗ್ಯ ಮತ್ತು ನೆಮ್ಮದಿಯನ್ನು ಮನೋಳಿ ಕುಟುಂಬಕ್ಕೆ ನೀಡಲಿ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಶುಭ ಹಾರೈಸಿದರು.

ಅವರು ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗಿರೀಶ ಮನೋಳಿ ಅವರ ನಿವೃತ್ತಿ ದಿನದ ಬೀಳ್ಕೊಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಸವದತ್ತಿ ತಾಲೂಕು ಅಕ್ಷರ ದಾಸೋಹ ಕಾರ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಗಿರೀಶ ಮನೋಳಿ ಅವರ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿಗಳಾದ ಲಕ್ಷ್ಮಣ ರಾವ್ ಯಕ್ಕುಂಡಿ. ಸವದತ್ತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಆನಂದ ಬಡಕುಂದ್ರಿ. ತಾಲೂಕು ವೈದ್ಯಾಧಿಕಾರಿ ಶ್ರೀಪಾದ ಸಬನೀಸ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿರಣ ಕುರಿ, ನೌಕರರ ಸಂಘದ ಅಧ್ಯಕ್ಷರಾದ ಅಶೋಕ ಮುರಗೋಡ, ಯುವದುರೀಣ ಅಶ್ವತ್ಥ ವೈದ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ ಶ್ರೀಕಾಂತ ಯರಡ್ಡಿ, ಪ್ರಶಾಂತ್ ಹಂಪಣ್ಣವರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಗಿರೀಶ ಮನೋಳಿ ದಂಪತಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು  ವಿವಿಧ ಶಾಲೆಗಳವರು ಸೇರಿದಂತೆ ತಾಲೂಕಿನ ವಿವಿಧ ಸಂಘಟನೆ ಗಳ ವತಿಯಿಂದ ಸನ್ಮಾನ ಗೌರವ ಜರುಗಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ,  ಲಕ್ಷ್ಮಣರಾವ್ ಯಕ್ಕುಂಡಿ. ಆನಂದ ಬಡಕುಂದ್ರಿ ಮೊದಲಾದವರು ಮನೋಳಿ ಅವರ ಸೇವೆ ಕುರಿತು ಮಾತನಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ರತ್ನಾ ಸೇತಸನದಿ ಪ್ರಾರ್ಥನಾ ಗೀತೆಯನ್ನು ಹಾಡಿದರು. ಬೆಟಗೇರಿ ಕಾರ್ಯ ಕ್ರಮ ನಿರೂಪಿಸಿದರು. ಮೈತ್ರಾದೇವಿ ವಸ್ತ್ರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರೀಶ ಮುನವಳ್ಳಿ ಅಮೇರಿಕಾದಲ್ಲಿ ಇರುವ ತಮ್ಮ ಮಗ ಹಾಗೂ ಸೊಸೆ ಕಳಿಸಿದ ಸಂದೇಶ ಓದುವ ಮೂಲಕ ತಮ್ಮ ವೃತ್ತಿ ಬದುಕಿನ ಕ್ಷಣಗಳನ್ನು ನೆನಪಿಸಿಕೊಂಡರು. ಕಾರ್ಯಕ್ರಮದ ಕೊನೆಯಲ್ಲಿ ಮಂಜುನಾಥ ಕಮ್ಮಾರ ವಂದಿಸಿದರು

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group