ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಉಪನ್ಯಾಸಕರು ಮುಂದಾಗಬೇಕು

Must Read

ಸಿಂದಗಿ : ವಿದ್ಯಾರ್ಥಿಗಳು ಏಕಾಗ್ರತೆಯಿಂದ ಸತತ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಜೊತೆಗೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕಬೇಕು ಎಂದು ಸಾರಂಗಮಠ – ಗಜ್ಜಿನಮಠದ ಪೀಠದ ಒಡೆಯ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.

ಪಟ್ಟಣದ ಸರಕಾರಿ ಪದವಿ ಪೂರ್ವ ಕಲಾ ಮತ್ತು ವಿಜ್ಞಾನ ಕಾಲೇಜ ಪ್ರಥಮ ವರ್ಷದ ವಿದ್ಯಾರ್ಥಿಗಳ ಹಾಗೂ ನೂತನ ಪ್ರಾಚಾರ್ಯರ ಸ್ವಾಗತ ಸನ್ಮಾನ ಹಾಗೂ ಪಿ ಯು ಸಿ ದ್ವಿತೀಯ ವರ್ಷದಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಸತ್ಪಜೆಗಳಾದ್ದರಿಂದ ಮಕ್ಕಳು ಬಾಲ್ಯದಿಂದಲೇ ಶಿಸ್ತು ಸಂಯಮ, ಮಾನವೀಯ ಮೌಲ್ಯಗಳು, ಪರೋಪಕಾರ ಹಾಗೂ ಸೇವಾ ಮನೋಭಾವನೆಯ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕುವ ಜೊತೆಗೆ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸಾಧನೆ ಮಾಡಿ ತಂದೆ ತಾಯಿಗಳು ಹಾಗೂ ಕಾಲೇಜಿಗೆ ಕೀರ್ತಿ ತರುವ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಚಾರ್ಯರ ಬಸವರಾಜ ಡಿ ದೋಟಿಹಾಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಉಪನ್ಯಾಸಕರು ಮುಂದಾಗಬೇಕು ಎಂದರು.

ಹಿರಿಯ ಉಪನ್ಯಾಸಕರಾದ ಜಿ .ಎಸ್ ಮೋರಟಗಿ ಮಾತನಾಡಿ ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ
ಪ್ರಪಂಚದಲ್ಲಿ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆ ನೀಡಿ ಸಾಧನೆ ಮಾಡಬೇಕಾದರೆ ಜ್ಞಾನ ಮತ್ತು ಕಂಪ್ಯೂಟರ್ ಶಿಕ್ಷಣ ಜ್ಞಾನದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳು ಮೊಬೈಲ್ ಫೋನ್ ವ್ಯಾಮೋಹದಿಂದ ದೂರವಿದ್ದು ಏಕಾಗ್ರ ಪ್ರಗತಿಯನ್ನು ಸಾಧಿಸುತ್ತಿರು ಅತ್ಯುತ್ತಮ ಸಾಧನೆಯನ್ನು ಮಾಡಬೇಕು ಎಂದು ಕರೆ ನೀಡಿದರು.

ಎಂ.ಆರ್ ಹೆಬ್ಬಳ್ಳಿ ಎ ಆರ್ ರಜಪೂತ, ಸಿದ್ದು ಹೂಳಿ, ಸಂತೋಷ ಮಜ್ಜಿಗಿ, ಜಿ ಎನ್ ಹಿರೇಮಠ, ಜಟ್ಟು ಗಾಣಿಗೇರ, ಹೇಮಲತಾ ಪಾಟೀಲ, ರುಕುಮುನಿ ಭಾಗವಹಿಸಿದರು.

ಉಪನ್ಯಾಸಕ ಶಶಿಧರ ಅವಟಿ ಸ್ವಾಗತಿಸಿದರು. ಉಪನ್ಯಾಸಕ ಬಸನಗೌಡ ಬಿರಾದಾರ ನಿರೂಪಿಸಿದರು.ಉಪನ್ಯಾಸಕ ಮೌಲಾಲಿ ಯಾಳಗಿ ವಂದಿಸಿದರು.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group