ಬೀದರ – ಆಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೀದರ್ ನ ಜೈಲ್ ಕಾಲೋನಿಯ ಎಸ್ ಬಿಪಿ ನಗರದ ಸುನೀಲ್ ಕುಮಾರ್ ಚಂದ್ರಪ್ರಕಾಶ ಪ್ರಭಾ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾಗಿ ಕಲಬುರ್ಗಿ ಜಿಲ್ಲೆಯ ಇಂಜನಿಯರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುನೀಲ್ ಕುಮಾರ್ ಅವರ ಕಲಬುರ್ಗಿಯ ಕಚೇರಿ ಹಾಗೂ ನಿವಾಸದ ಮೇಲೂ ದಾಳಿ ನಡೆದಿದೆ
ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಲೋಕಾಯುಕ್ತ ತಂಡದಿಂದ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ವರದಿ : ನಂದಕುಮಾರ ಕರಂಜೆ, ಬೀದರ