ಕನ್ನಡ ಸಂಘಟನೆಗಳ ಮುಖಂಡರ ಜತೆ ಎಚ್ ಕೆ ಪಾಟೀಲ ಚರ್ಚೆ

Must Read

ಬೆಳಗಾವಿ – ಗಡಿ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಇಂದು ಶನಿವಾರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವ  ಎಚ್.ಕೆ.ಪಾಟೀಲ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಮುಖಂಡರ ಜೊತೆಗೆ ಸಭೆ ನಡೆಸಿದರು.

ಸಭಾಂಗಣ ಕಿಕ್ಕಿರಿದು ತುಂಬಿತ್ತು. ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್,ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ
ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ,ಪೋಲೀಸ್ ಆಯುಕ್ತ ಬೋರಸೆ ವೇದಿಕೆಯಲ್ಲಿದ್ದರು.

ಕನ್ನಡ ಸಂಘಟನೆಗಳ ಮುಖಂಡರು ಗಡಿ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಸಚಿವರು ಕೊನೆಗೆ ಉತ್ತರಿಸಿ ಗಡಿ ಭಾಗದ ಸಮಸ್ಯೆಗಳ ಪರಿಹಾರಕ್ಕೆ
ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಸಂಬಂಧ ಕರ್ನಾಟಕದ ನಿಲುವು ಸ್ಪಷ್ಟವಾಗಿದ್ದು ” ಮಹಾಜನ
ವರದಿಯೇ ಅಂತಿಮವಾಗಿದ್ದು ಅದನ್ನು ಮಹಾರಾಷ್ಟ್ರವು ಒಪ್ಪದಿದ್ದರೆ ಯಥಾ ಸ್ಥಿತಿಯೇ ಮುಂದುವರೆಯಲಿದೆ
ಎಂದು ಸಚಿವರು ಸ್ಪಷ್ಟಪಡಿಸಿದರು.

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group