ಯೂರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ಸರಕಾರವೆ ಕಾರಣ: ಶ್ರೀಶೈಲಗೌಡ ಕಿಡಿ

Must Read
   ಸಿಂದಗಿ: ರಾಜ್ಯದಲ್ಲಿ ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಾಲ್ಲೂಕ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರವರು ಸರ್ಕಾರದ ಮೇಲೆ ಕಿಡಿಕಾರಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ರಾಜ್ಯದಲ್ಲಿ ಈ ಬಾರಿ ಸರ್ಕಾರದ ಅಸಹಕಾರ ಮತ್ತು ನಿರ್ಲಕ್ಷ್ಯದಿಂದ ಯುರಿಯಾ ಗೊಬ್ಬರ ಅಭಾವ ಉಂಟಾಗಿದ್ದು, ಇದರಿಂದ ಕೆಲವು ಕಡೆಗಳಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗುತ್ತಿದೆ. ಇನ್ನೂ ಅನೇಕ ಕಡೆಗಳಲ್ಲಿ ಯುರಿಯಾ ಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮುಂಗಾರು ಪ್ರಾರಂಭದಲ್ಲೇ ಮಳೆಯ ಹವಾಮಾನ ವೈಪರೀತ್ಯವನ್ನು ತಜ್ಞರಿಂದ ಮಾಹಿತಿ ಪಡೆದು ಹೆಚ್ಚಿನ ದಾಸ್ತಾನು ತರಿಸಲು ಮುತುವರ್ಜಿ ವಹಿಸಬೇಕಾಗಿತ್ತು, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ, ಈಗಲೂ ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಒಂದು ವಾರದ ಒಳಗಡೆ ಹೆಚ್ಚಿನ ದಾಸ್ತಾನು ತರಿಸುವ ಮೂಲಕ ರೈತರಿಗೆ ನೆರವಾಗುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group