ಹಳ್ಳೂರ- ಗ್ರಾಮದಲ್ಲಿ ವಿವಿಧ ಕಡೆ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣವನ್ನು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ನೆರವೇರಿಸಲಾಯಿತು.
ಗ್ರಾಮ ಪಂಚಾಯತಿ ಕಚೇರಿಯಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ, ವಿವಿಧ ಸಹಕಾರಿ ಬ್ಯಾಂಕ, ಗ್ರಾಮ ಆಡಳಿತ ಅಧಿಕಾರಿ ಕಛೇರಿ, ಪಶು ಆಸ್ಪತ್ರೆ, ಗ್ರಾಮದ ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿದರು.
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಿ ಗೌರವಿಸಿದರು. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ನಿಮಿತ್ಯ ಕೇಕ್ ಕಟ್ ಮಾಡಿ ಹುಟ್ಟು ಹಬ್ಬವನ್ನು ಆಚರಿಸಿದರು. ಶಾಲೆಯ ವಿದ್ಯಾರ್ಥಿಗಳು ಮಹಾನ್ ಮೇಧಾವಿಗಳ ರೂಪದಲ್ಲಿ ವೇಷ ಭೂಷಣ ದರಿಸಿದ್ದು ವಿಶೇಷವಾಗಿ ಕಂಡು ಬಂದಿತು.