ಸಿಂದಗಿ; ತಾಲೂಕಾ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನೌಕರರ ಸಂಘದವತಿಯಿಂದ ೨೪ ರಂದು ಪಟ್ಟಣದ ಗುಂದಗಿ ಹಾಲ್ನಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ರಾಯಣ್ಣ ಇವಣಗಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ನಿಮಿತ್ತ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ೫೦ ವಿದ್ಯಾರ್ಥಿಗಳು ಪುರಸ್ಕಾರಕ್ಕೆ ನೊಂದಣಿ ಮಾಡಿಕೊಂಡಿದ್ದು ಇನ್ನೂ ಕೆಲ ವಿದ್ಯಾರ್ಥಿಗಳ ನೊಂದಣಿಯಗುವ ಸಾಧ್ಯತೆಯಿದೆ ಎಂದು ತಿಳಿಸಿದ ಅವರು, ಅಂದು ನಡೆಯುವ ಕಾರ್ಯಕ್ರಮ ಗೊಳಸಾರ ಶ್ರೀ ಮಠದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು ಹಾಗೂ ಹುಲಜಂತಿಯ ಮಾಳಿಂಗರಾಯ ಮಹಾರಾಜರ ಸಾನ್ನಿಧ್ಯದಲ್ಲಿ ಕರ್ನಾಟಕ ಮಹಿಳಾ ಆಯೋಗದ ಅದ್ಯಕ್ಷೆ ನಾಗರತ್ನ ಚೌಧರಿ ಉದ್ಘಾಟಿಸಲಿದ್ದಾರೆ.
ಶಾಸಕ ಅಶೋಕ ಮನಗೂಳಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರ ಇನ್ಸೆಂಟ್ ಐಎಎಸ್ ಅಕಾಡೆಮಿ ಸಂಸ್ಥಾಪಕರು ಹಾಗೂ ನಿರ್ದೇಶಕ ಜಿ.ಬಿ.ವಿನಯಕುಮಾರ ವಿಶೇಷ ಉಪನ್ಯಾಸ ನೀಡಲಿದ್ದಾರೆ, ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್.ಕರಡಿ, ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಸೇರಿದಂತೆ ಅನೇಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.
೯ ಹಳ್ಳಿಗಳ ಡೊಳ್ಳು ವಾದ್ಯದೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆಗೆ ಚಾಲನೆ ದೊರೆಯಲಿದೆ ಕಾರಣ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಈ ಪತ್ರಿಕಾಗೋಷ್ಠಿಯಲ್ಲಿ ಆರ್.ಕೆ.ಪಾಟೀಲ, ಎಲ್.ಎಸ್.ಪರಮಾನಂದ, ಎ.ವೈ.ತಳಕೆರಿ, ಎಂ.ಬಿ.ಮಾಕೊಂಡ, ಎಸ್.ಎಲ್.ಸುಂಬಡ, ಮಾಳು ಹೊಸೂರು, ಎಚ್.ಬಿ.ಪೂರಿ ಇದ್ದರು.