ಕು. ಸಂಜು ಘೋಡಗೇರಿ ರಾಚವಿ ವಿದ್ಯಾವಿಷಯಕ್ ಪರಿಷತ್ತಿನ ಸಭೆಗೆ ಆಯ್ಕೆ

Must Read

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಯೋಗಪಟು ಕು. ಸಂಜು ಘೋಡಗೇರಿ ಇವರನ್ನು ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ವಿದ್ಯಾವಿಷಯಕ್ ಪರಿಷತ್ತಿನ ಸಭೆಗೆ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, ೨೦೦೦ದ ಪ್ರಕರಣ ೩೦(೧)(x) ಅನ್ವಯ ಕ್ರೀಡಾಪಟು ವಿಭಾಗದಿಂದ ನೂತನ ಸದಸ್ಯರನ್ನಾಗಿ  ಕುಲಪತಿಗಳಾದ ಪ್ರೊ. ಸಿ.ಎಂ. ತ್ಯಾಗರಾಜ ಅವರ ಅನುಮೋದನೆ ಮೇರೆಗೆ ಕುಲಸಚಿವರಾದ ಸಂತೋಷ ಕಾಮಗೌಡ ಅವರು ನಾಮನಿರ್ದೇಶನ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಕು. ಸಂಜು ಘೋಡಗೇರಿ ಅವರನ್ನು ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಚೇರಮನ್ನರಾದ ಬಸಗೌಡ ಪಾಟೀಲ, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ದೈಹಿಕ ನಿರ್ದೇಶಕ ಬಿ.ಕೆ. ಸೊಂಟನವರ, ಶಿಕ್ಷಕ/ಶಿಕ್ಷಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...

More Articles Like This

error: Content is protected !!
Join WhatsApp Group