ಮೂಡಲಗಿ:- ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ೨೦೨೫-೨೬ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು ಸೆ.೨೯ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.೨೯ರಂದು ಬೆಳಿಗ್ಗೆ ೯.೦೦ಗಂಟೆಗೆ ಹಾಜರಿದ್ದು ವಿವಿದ ಸ್ಪರ್ದೆಯಲ್ಲಿ ಭಾಗವಹಿಸುವವರು ಕ್ಯೂ ಆರ್ ಕೋಡ್ ಅಥವಾ ವೆಬ್ ಸೈಟ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಕ್ರೀಡಾಕೂಟ ಅನುಷ್ಠಾನಾಧಿಕಾರಿ ರೋಹಿಣಿ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ : ಅಥ್ಲೆಟಿಕ್ಸ್(ಪುಷರಿಗಾಗಿ): ೧೦೦,೨೦೦, ೪೦೦, ೮೦೦,೧೫೦೦, ೫೦೦೦, ೧೦,೦೦೦ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್ ಜಾವಲಿನ್À, ಥ್ರೋ ಡಿಸಸ್ ಥ್ರೋ ೧೧೦ಮೀ ಹರ್ಡಲ್ ೪-೧೦೦ ರೀಲೆ ೪ -೪೦೦ ರೀಲೆ ಅಥ್ಲೆಟಿಕ್ಸ್ (ಮಹಿಳೆಯರಿಗಾಗಿ) : ೧೦೦, ೨೦೦, ೪೦೦, ೮೦೦ಮೀ, ೧೫೦೦ಮೀ, ೩೦೦೦ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥೋ, ೧೦೦ಮೀ ಹರ್ಡಲ್ಸ್.೪-೧೦೦ ರೀಲೆ ೪ – ೪೦೦
ಗುಂಪು ಆಟಗಳು : ವಾಲಿಬಾಲ್, ಪುಟ ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಸ್ (ಪುರುಷ ಮತ್ತು ಮಹಿಳೆಯರಿಗಾಗಿ).
ನಿಯಮಗಳು: ದಸರಾ ಭಾಗವಹಿ ಕ್ರೀಡಾಕೂಟದಲ್ಲಿ ಸುವ ಕ್ರೀಡಾಪಟುಗಳು ಮೂಡಲಗಿ ತಾಲೂಕಿನ ರಹವಾಸಿಯಾಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗ ವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿ ದಲ್ಲಿ ಅಂತವರ ಆಯ್ಕೆಯನ್ನು ರದ್ದು ಗೊಳಿಸಲಾಗುವುದು.ಗುಂಪು ಸ್ಪರ್ಧೆಗಳಲ್ಲಿ ಸಂಪೂರ್ಣ ತಂಡವನ್ನು ರದ್ದುಗೊಳಿಸಲಾಗುವುದು.
ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು. ಭಾಗವಹಿಸುವ ಕ್ರೀಡಾಪ ಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣಭತ್ಯೆ ಹಾಗೂ ದಿನಭತ್ಯೆಯನ್ನುನೀಡಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಮೋ,೮೬೧೮೧೬೯೦೦೩, ೯೪೪೯೯೭೬೭೬ ಸಂಪರ್ಕಿ ಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.