ಶಿವಾಜಿ ಹೆಸರು ಬದಲು : ಡಾ. ಮನೋಜ ಅಖಾರೆ ಖಂಡನೆ

Must Read

ಬೀದರ – ಛತ್ರಪತಿ ಶಿವಾಜಿ ಮಹಾರಾಜರು ಒಬ್ಬ ಪ್ರೇರಣಾ ಪುರುಷ ಹಿಂದೂ ಸಾಮ್ರಾಜ್ಯದ ಅತ್ಯಂತ ಯಶಸ್ವಿ ರಾಜ ಅಂಥವರ ಹೆಸರನ್ನು ಶಿವಾಜಿನಗರ ಮೆಟ್ರೋ ರೈಲು ನಿಲ್ದಾಣದಿಂದ ಬದಲಾಯಿಸಿದರೆ ರಾಜ್ಯ ಸರ್ಕಾರದ ವಿರುದ್ಧ ಅತ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ರಾಜ್ಯ ಸಂಭಾಜಿ ಬ್ರಿಗೇಡ್ ಅಧ್ಯಕ್ಷ ಡಾ. ಮನೋಜ ಅಖಾರೆ ವಾಗ್ದಾಳಿ ನಡೆಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ಯಾವಾಗಲೂ ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡುತ್ತ ಬಂದಿವೆ ಎಂದರು.

ಮರಾಠಾ ಸಮುದಾಯದ ಜನರು ೨೨ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಜಯ ಸಿಕ್ಕಿಲ್ಲ. ಮೀಸಲಾತಿ ಸಿಗುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ನಮ್ಮ ಸಮುದಾಯಕ್ಕೆ ಮೋಸಮಾಡಿದ್ದಾರೆ. ಈ ಸರ್ಕಾರದಿಂದ ಕೂಡ ಅನ್ಯಾಯವಾಗಿದೆ ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿ ಪ್ರತಿಭಟನೆ ಆರಂಭಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group