ಬೀದರ – ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋದ ಮಧ್ಯವಯಸ್ಕ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ
ಬೀದರ ದಕ್ಷಿಣ ಕ್ಷೇತ್ರದ ಬರೂರ ಗ್ರಾಮದ ಪ್ರಭಾಕರ ರೆಡ್ಡಿ ಎಂಬ ವ್ಯಕ್ತಿಯು ತಮ್ಮೂರು ಬರೂರ ನಿಂದ ಗಂಗ್ವಾರ ಮಧ್ಯದಲ್ಲಿರುವ ಸೇತುವೆ ದಾಟಲು ಹೋಗಿ ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದನು ವ್ಯಕ್ತಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು…
ಸುದ್ದಿ ತಿಳಿದು ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಘಟನಾ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರ ಕಾರ್ಯಾಚರಣೆಯಿಂದ ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದೆ …
ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ….ಸೇತುವೆ ಸುತ್ತಮುತ್ತ ನಿಗಾ ವಹಿಸಬೇಕು ಮುಂದೆ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕಂದಾಯ ಇಲಾಖೆ ಹಾಗೂ ಪೋಲಿಸ್ ಅಧಿಕಾರಿಗಳಿಗೆ ತಿಳಿಸಿದರು..

