ಬೀದರ – ಬೀದರ ತಾಲೂಕಿನ ಬಗದಲ್ ಗ್ರಾಮದಲ್ಲಿ ಬಾಲಕಿಯೊಬ್ಬಳನ್ನು ಬೀದಿನಾಯಿಯೊಂದು ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಬಗದಲ್ ಗ್ರಾಮದ ಸ್ನೇಹಾ (7) ಗಂಭೀರವಾಗಿ ಗಾಯಗೊಂಡ ಬಾಲಕಿ.
ಬಾಲಕಿಯ ತುಟಿ, ಗಲ್ಲ, ಕಣ್ಣಿನ ಕೆಳಭಾಗ, ಹುಬ್ಬಿಗೆ ತೀವ್ರ ಗಾಯವಾಗಿದ್ದು ಬೀದರ್‌ನ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನಡೆದಿದೆ. ಅನೇಕ ಹೊಲಿಗೆಗಳು ಬಿದ್ದಿವೆ.
ನಿನ್ನೆ ಬೆಳಿಗ್ಗೆ ತನ್ನ ಗೆಳತಿಯರೊಂದಿಗೆ ದೇವಸ್ಥಾನಕ್ಕೆ ತೆರಳಿದ್ದಾಗ ಬಾಲಕಿ ಮೇಲೆ ದಾಳಿ ಮಾಡಿದ್ದ ಬೀದಿ ನಾಯಿ. ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಮಕ್ಕಳ ಆಯೋಗದಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ
ಈ ಕುರಿತು ಪತ್ರಿಕೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಮಾಹಿತಿ ನೀಡಿದರು. ಬಗದಲ್ ಗ್ರಾಮದಲ್ಲಿ ಬೀದಿ ಮತ್ತು ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳ ಕಾಟದಿಂದ ಹೊರಗೆ ಓಡಾಡಲು ಆಗುತ್ತಿಲ್ಲ. ಚಿಕ್ಕ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ.
ವರದಿ : ನಂದಕುಮಾರ ಕರಂಜೆ, ಬೀದರ

