ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ

Must Read

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು.

ಮುಖ್ಯಶಿಕ್ಷಕರಾದ ಎನ್. ಆರ್. ಠಕ್ಕಾಯಿ ಮಾತನಾಡಿ ಸತ್ಯ ಮತ್ತು ಅಹಿಂಸೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮಹಾತ್ಮರಾದ ಗಾಂಧೀಜಿ ಹಾಗೂ ದಕ್ಷತೆ, ಪ್ರಾಮಾಣಿಕತೆ ಮತ್ತು ಸರಳತೆಗೆ ಬದ್ದರಾಗಿ ಅಜರಾಮರರಾದ ಶಾಸ್ತ್ರೀಜಿ ಅವರ ಆದರ್ಶ ಬದುಕು ನಮಗೆಲ್ಲ ಮಾದರಿಯಾಗಲಿ ಎಂದು ಹೇಳಿದರು. ದೇಶ ಕಂಡ ಇಬ್ಬರು ಅಪ್ರತಿಮ ಮಹಾನಾಯಕರ ಜೀವನ, ಸಂದೇಶಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಾದ ಸಾನಿಕಾ ಕುಲಕರ್ಣಿ, ಭಾಗ್ಯಶ್ರೀ ಬಡಿಗೇರ, ಕಲ್ಮೇಶ ಗುಡ್ಡದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ರಾಮು ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಶಾಲಾ ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group