ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಹಳೆಯ ವಿದ್ಯಾರ್ಥಿನಿಯಾದ ರಾಜೇಶ್ವರಿ ಸೊಗಲದ ಮಾತನಾಡಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿದ ವಾಲ್ಮೀಕಿ ಅವರ ಆದರ್ಶ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು. ಭಾಗ್ಯಶ್ರೀ ಬಡಿಗೇರ ಆದಿಕವಿಯ ಜೀವನದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಎಸ್.ಡಿ.ಎಂ.ಸಿ ಸದಸ್ಯರಾದ ರಾಮು ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.