ಬೀದರ – ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ರೈತನೊಬ್ಬ ಚೆಂಡು ಹೂವಿನ ನಡುವೆ ಗಾಂಜಾ ಬೆಳೆದು ಸಿಕ್ಕಿಬಿದ್ದಿದ್ದಾನೆ
ಸಾವಳಿ ಗ್ರಾಮದ ಸರ್ವೆ ನಂ.18/2ರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ರೈತ ಸಂತೋಷ್.
ಹೂವಿನ ಗಿಡಗಳ ಮಧ್ಯೆ ಅಕ್ರಮವಾಗಿ ಬೆಳೆದ 15 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಜಪ್ತಿ ಮಾಡಿದ್ದಾರೆ
ಆರೋಪಿ ಸಂತೋಷ್ ನನ್ನ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ ಪಿ ಪ್ರದೀಪ್ ಗುಂಟಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ವರದಿ : ನಂದಕುಮಾರ ಕರಂಜೆ, ಬೀದರ