ಬೀದರ- ಬೆಳ್ಳಂಬೆಳಗ್ಗೆಯೇ ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದೆ.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ನಿವಾಸ ಮೇಲೆ ದಾಳಿ. ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ದೂಳಪ್ಪ ನಿವಾಸ ಸೇರಿದಂತೆ ಜಿಲ್ಲೆಯಾದ್ಯಂತ ನಾಲ್ಕು ಕಡೆ ದಾಳಿ ನಡೆಸಿದೆ
ಗುರುನಾನಕ ಕಾಲನಿಯ ನಿವಾಸ, ಭಾಲ್ಕಿಯ ಕಡ್ಯಾಳ, ಔರಾದ್ ನ ಎಡಿ ಆಫೀಸ್ ಮತ್ತು ಮುದೋಳ ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವ ಹಾಗೂ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
ವರದಿ : ನಂದಕುಮಾರ ಕರಂಜೆ, ಬೀದರ

