ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ – ಕರ್ನಾಟಕ ಮೂಲದ ನಾಲ್ವರು ಸಾವು!

Must Read

ಬೀದರ್ : ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೀದರ್​ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರು ಬೀದರ್ ತಾಲೂಕಿನ ಖಾಶೆಂಪೂರ್​ ಗ್ರಾಮದ ನಿವಾಸಿಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಕುಮಾರ​, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ.

ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ಭೀಕರತೆಗೆ ಕಾರೊಂದು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಗಳವಾರ ಬೆಳಗಿನ ಜಾವ ದುರಂತ ಸಂಭವಿಸಿದ್ದು, ಐವರು ಸ್ನೇಹಿತರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group