ಕಟ್ಟೀಮನಿ ಕಥಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Must Read

ಮೂಡಲಗಿ: ಕಥೆಗಳ ಮೂಲಕ ಬಸವರಾಜ ಕಟ್ಟೀಮನಿಯವರ ಸಾಹಿತ್ಯ ಮತ್ತು ಚಿಂತನೆಗಳನ್ನು ಯುವ ಪೀಳಿಗೆಗೆ ತಲುಪಿಸುವುದು ಈ ಸ್ಫರ್ಧೆಯ ಉದ್ದೇಶವಾಗಿದೆ. ಕುವೆಂಪು ನಂತರದಲ್ಲಿ ಬದುಕು ಮತ್ತು ಬರಹದ ನಡುವೆ ಭಿನ್ನತೆಯಿಲ್ಲದೆ ಬದುಕಿದವರು ಬಸವರಾಜ ಕಟ್ಟೀಮನಿಯವರು. ಇಂದಿನ ವಿದ್ಯಾರ್ಥಿಗಳು ಕಥೆ ಮತ್ತು ಸಾಹಿತ್ಯದ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು  ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಯಲ್ಲಪ್ಪ ಹಿಮ್ಮಡಿ ಅವರು ಕಿವಿಮಾತು ಹೇಳಿದರು.

ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ
ಕರ್ನಾಟಕ ಸರಕಾರದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ, ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ‘ಕಟ್ಟೀಮನಿ ಕಥಿ ಹೇಳೊಣು’ ಕಥಾ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ರಾ.ಚ.ವಿ.ವಿ. ವ್ಯಾಪ್ತಿಯ ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಎಸ್. ಆಯ್. ಬಿರಾದಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು.

ಅವರು ಮಾತನಾಡಿ, ಸ್ಪರ್ಧೆಗಳು ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಕಟ್ಟೀಮನಿಯವರು ಕಥೆಗಳ ಮೂಲಕ ಬದುಕಿನ ತವಕ-ತಲ್ಲಣಗಳನ್ನು ನಿರೂಪಿಸಿದ್ದಾರೆ. ಅವರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ. ಸುರೇಶ ಹನಗಂಡಿ ಅವರು ಮಾತನಾಡಿ, ಬಸವರಾಜ ಕಟ್ಟೀಮನಿ ಅವರ ಸಾಹಿತ್ಯ ಖಡ್ಗಕ್ಕಿಂತ ಹರಿತವಾಗಿತ್ತು. ಸಮಾಜವನ್ನು ತಿದ್ದುವ  ಮೌಲ್ಯಗಳು ಕಟ್ಟೀಮನಿ ಅವರ ಕಥೆಗಳಲ್ಲಿ ಕಂಡುಬರುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು  ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಆರ್.ಇ.ಎಸ್. ಸಂಸ್ಥೆಯ ಚೇರಮನ್ನರಾದ ಬಸಗೌಡ ಪಾಟೀಲ ವಹಿಸಿದ್ದರು.

ಈ ಸಂದರ್ಭದಲ್ಲಿ ‘ಕಟ್ಟೀಮನಿ ಕಥಿ ಹೇಳೂಣು’ ಕಥಾ ಸ್ಪರ್ಧೆಯಲ್ಲಿ ವಿಜೇತರಾದ ಲಕ್ಷ್ಮೀ ಕಲ್ಲೋಳಿ(ಪ್ರಥಮ), ಪ್ರೇಮಾ ಪೂಜಾರಿ(ದ್ವೀತಿಯ) ಸಂಗೀತಾ ಘೋರ್ಪಡೆ(ತೃತೀಯ)  ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ರಾಧಿಕಾ ಕರೆವ್ವಗೋಳ ಹಾಗೂ ಪೂಜಾ ಪಂಡ್ರೋಳಿ  ಪ್ರಾರ್ಥನೆ ಹಾಡಿದರು. ಪ್ರೊ. ಡಿ.ಎಸ್. ಹುಗ್ಗಿ ಸ್ವಾಗತಿಸಿದರು. ಡಾ. ಕೆ.ಎಸ್. ಪರವ್ವಗೋಳ ನಿರೂಪಿಸಿದರು. ಪ್ರೊ. ಎಂ. ಬಿ. ಜಾಲಗಾರ ವಂದಿಸಿದರು.

LEAVE A REPLY

Please enter your comment!
Please enter your name here

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...

More Articles Like This

error: Content is protected !!
Join WhatsApp Group